ಅರವಿಂದ್ ಕೇಜ್ರಿವಾಲ್ 
ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!

ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.

ನವದೆಹಲಿ: ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.

ಜನರು ವಾಟ್ಸಪ್  ನಂಬರ್ 6357000360 ಮೂಲಕ ತಮ್ಮ ಅಭಿಪ್ರಾಯವನ್ನು ದಾಖಲಿಸಬಹುದಾಗಿದೆ ಅಲ್ಲದೇ ವೈಸ್ ಮೇಸೆಜ್ ಕೂಡಾ ಮಾಡಬಹುದಾಗಿದೆ. ನವೆಂಬರ್ 3ರವರೆಗೂ ವಾಟ್ಸಾಪ್ ಮತ್ತು ಎಸ್ ಎಂಎಸ್ ಕಳುಹಿಸಬಹುದಾಗಿದೆ. ನವೆಂಬರ್ 4ರಂದು ಫಲಿತಾಂಶವನ್ನು ಘೋಷಿಸಲಾಗುತ್ತದೆ. ಕೇಜ್ರಿವಾಲ್ ಇ-ಮೇಲ್ ಐಡಿಯೊಂದನ್ನು ಹಂಚಿಕೊಂಡಿದ್ದು, ಅದರ ಮೂಲಕವೂ ಸಂದೇಶ ಕಳುಹಿಸಲು ಅವಕಾಶವಿದೆ.

ಪಂಜಾಬ್ ನಲ್ಲಿಯೂ ಇದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸಿ, ಭಗವಂತ್ ಮಾನ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಂತರ ಪಕ್ಷ ಚುನಾವಣೆಯಲ್ಲಿ ಭರ್ಜರಿ ಜಯ ಭೇರಿ ಬಾರಿಸಿತ್ತು, ಮಾನ್ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದರು. 182 ಸದಸ್ಯ ಬಲದ ಗುಜರಾತ್ ವಿಧಾನಸಭಾ ಚುನಾವಣೆ ಈ ವರ್ಷಾಂತ್ಯದೊಳಗೆ ನಡೆಯಲಿದೆ. ಆದಾಗ್ಯೂ, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಇನ್ನೂ ಪ್ರಕಟಿಸಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT