ದೇಶ

ಬಿಹಾರದ ಔರಂಗಾಬಾದ್‌ನಲ್ಲಿ ಛಾತ್ ಪೂಜೆ ವೇಳೆ ಭಾರಿ ಬೆಂಕಿ ಅವಘಡ, 25 ಮಂದಿಗೆ ಗಾಯ

Ramyashree GN

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆಯ ಮಾಲೀಕ ಅನಿಲ್ ಗೋಸ್ವಾಮಿ ಅವರ ಕುಟುಂಬವು 2.30 ರ ಸುಮಾರಿಗೆ ಛಾತ್ ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಆದರೆ, ಅಡುಗೆ ಅನಿಲ ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿ ಮತ್ತಷ್ಟು ಆವರಿಸುವಂತೆ ಮಾಡಿತು ಎಂದು ಅವರು ಹೇಳಿದರು.

ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದನ್ನು ಪತ್ತೆ ಮಾಡಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

SCROLL FOR NEXT