ಆರೋಪಿಗಳು 
ದೇಶ

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಆರೋಪಿಗಳನ್ನು ಮತ್ತೆ ಬಂಧಿಸಿದ ಸೈಬರಾಬಾದ್ ಪೊಲೀಸರು

ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.

ಹೈದರಾಬಾದ್: ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.

ಆರೋಪಿಗಳ ಬಂಧನವನ್ನು ತಿರಸ್ಕರಿಸಿದ್ದ ಕೆಳ ನ್ಯಾಯಾಲಯದ ಆದೇಶವನ್ನು ತೆಲಂಗಾಣ ಹೈಕೋರ್ಟ್ ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ನಂದು ಅವರ ನಿವಾಸದಲ್ಲಿ ಬಿಜೆಪಿ ಜೊತೆ ನಂಟು ಹೊಂದಿದ್ದ ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ಕೋರೆ ನಂದ ಕುಮಾರ್ ಅಲಿಯಾಸ್ ನಂದು ಮತ್ತು ಸಿಂಹಯಾಜಿ ಅವರನ್ನು ಬಂಧಿಸಲಾಗಿದೆ.

ನಂತರ ಆರೋಪಿಗಳನ್ನು ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ಗೆ ಕರೆದೊಯ್ದು, ಅಲ್ಲಿಂದ ಮೊಯಿನಾಬಾದ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. 

ಅಕ್ಟೋಬರ್ 26 ರಂದು ತೋಟದ ಮನೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ(ಟಿಆರ್‌ಎಸ್) ನಾಲ್ವರು ಶಾಸಕರಿಗೆ ಭಾರಿ ಹಣದ ಆಮಿಷ ಒಡ್ಡಲು ಪ್ರಯತ್ನಿಸುತ್ತಿದ್ದಾಗ ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಲಾಗಿತ್ತು.

ಪೊಲೀಸರು ಆರೋಪಿಗಳನ್ನು ಮತ್ತೆ ಹಾಜರುಪಡಿಸಿದರೆ ಅವರನ್ನು ಕಸ್ಟಡಿಗೆ ಕಳುಹಿಸುವಂತೆ ಕೆಳ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದ ಒಂದೆರಡು ಗಂಟೆಗಳ ನಂತರ ಆರೋಪಿಗಳನ್ನು ಮತ್ತೆ ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

Toxic ಬೆನ್ನಲ್ಲೇ ಭಾರೀ ಹೈಪ್ ಕ್ರಿಯೆಟ್ ಮಾಡಿದ್ದ Paradiseಗೆ ತೆಲುಗರಿಂದಲೇ ತರಾಟೆ; ಆದರೂ ಮೊದಲ ದಿನ ದಾಖಲೆ ಕಲೆಕ್ಷನ್!

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆ

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು; Video