ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,604 ಹೊಸ ಪ್ರಕರಣ ಪತ್ತೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,604 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,604 ಹೊಸ ಪ್ರಕರಣ ಪತ್ತೆಯಾಗಿದೆ. 

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,52,266ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕಳೆದ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,29,016ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,317ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,081 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,04,933ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,65,901 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,07,25,697 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,63,57,449 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧ

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿಗಳ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SCROLL FOR NEXT