ಸುಪ್ರೀಂಕೋರ್ಟ್ 
ದೇಶ

ಸಿಎಎ ಪ್ರಶ್ನಿಸಿರುವ 232 ಅರ್ಜಿಗಳು: ಸುಪ್ರೀಂನಲ್ಲಿ ನಾಳೆ ವಿಚಾರಣೆ

ಒಂಬತ್ತು ದಿನಗಳ ದೀಪಾವಳಿ ರಜೆ ನಂತರ ಸೋಮವಾರದಿಂದ ಪುನರ್ ಆರಂಭವಾಗುವ ಕಲಾಪದಲ್ಲಿ ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳು ಸೇರಿದಂತೆ ಸುಮಾರು 240 ಸಾರ್ವಜನಿಕ ಹಿತಾಸಕ್ತಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಿಗದಿಪಡಿಸಿದೆ.

ನವದೆಹಲಿ: ಒಂಬತ್ತು ದಿನಗಳ ದೀಪಾವಳಿ ರಜೆ ನಂತರ ಸೋಮವಾರದಿಂದ ಪುನರ್ ಆರಂಭವಾಗುವ ಕಲಾಪದಲ್ಲಿ ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳು ಸೇರಿದಂತೆ ಸುಮಾರು 240 ಸಾರ್ವಜನಿಕ ಹಿತಾಸಕ್ತಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಿಗದಿಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿಗಳಾದ ಎಸ್ . ರವೀಂದ್ರ ಭಟ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠ ಸಿಎಎಗೆ ಸಂಬಂಧಿಸಿದ 232 ಅರ್ಜಿಗಳನ್ನು ಅಕ್ಟೋಬರ್ 31 ರಂದು ವಿಚಾರಣೆಗೆ ಪಟ್ಟಿ ಮಾಡಿದೆ. ಈ ಹಿಂದೆ ನವೆಂಬರ್ 8ರಂದು ಕಚೇರಿಯಿಂದ ನಿರ್ಗಮಿಸಲಿರುವ ಸಿಜೆಐ  ಲಲಿತ್ ನೇತೃತ್ವದ ಪೀಠ, ಸಿಎಎಯನ್ನು ಪ್ರಶ್ನಿಸುವ ಅರ್ಜಿಗಳನ್ನು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿತ್ತು.

2014 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ  ದೇಶಕ್ಕೆ ಬಂದಿರುವ  ಹಿಂದೂ, ಸಿಖ್, ಬೌದ್ಧ, ಕ್ರಿಶ್ಚಿಯನ್, ಜೈನ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡಲು  2019 ರ ತಿದ್ದುಪಡಿ ಕಾನೂನು ಜಾರಿಗೆ ಬಂದಿದೆ. ಮುಸ್ಲಿಮರನ್ನು ಹೊರಗಿಡುವ ಬಗ್ಗೆ ವಿರೋಧ ಪಕ್ಷಗಳು, ನಾಯಕರು ಮತ್ತು ಇತರರಿಂದ ತೀವ್ರ ಟೀಕೆಗಳು ವ್ಯಕ್ತವಾಗಿವೆ.

ಈ ವಿಷಯ ಕುರಿತು ಅರ್ಜಿ ಸಲ್ಲಿಸಿರುವುದರಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮುಂಚೂಣಿಯಲ್ಲಿದೆ. ಕೇಂದ್ರದ ಮಾತುಗಳನ್ನು ಕೇಳದೆ ಪೌರತ್ವ (ತಿದ್ದುಪಡಿ) ಕಾಯ್ದೆಯ ಕಾರ್ಯಾಚರಣೆಯನ್ನು ತಡೆಹಿಡಿಯುವುದಿಲ್ಲ ಎಂದು ಜನವರಿ 2020 ರಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತು.

ಸಿಎಎಯನ್ನು ಪ್ರಶ್ನಿಸುವ ಅರ್ಜಿಗಳಿಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರಿರುವ ಉನ್ನತ ನ್ಯಾಯಾಲಯವು ಈ ವಿಷಯ ಕುರಿತ ಬಾಕಿ ಉಳಿದಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಲ್ಲೂ ನಿರ್ಬಂಧಿಸಿದೆ. ಈ ಕಾಯ್ದೆ ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಧರ್ಮದ ಆಧಾರದ ಮೇಲೆ ಹೊರಗಿಡುವ ಮೂಲಕ ಅಕ್ರಮ ವಲಸಿಗರ ಒಂದು  ವರ್ಗಕ್ಕೆ ಪೌರತ್ವವನ್ನು ನೀಡಲು ಉದ್ದೇಶಿಸಿದೆ ಎಂದು ಐಯುಎಂಎಲ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT