ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ 
ದೇಶ

ಮೋರ್ಬಿ ಸೇತುವೆ ಕುಸಿತ ಪ್ರಕರಣ: ರಾಜ್‌ಕೋಟ್‌ ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮೋರ್ಬಿ: ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರು, "ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

"ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಅಪಘಾತದಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಿಸಲಾಗಿದೆ ಮತ್ತು ಮಚ್ಚು ನದಿಯಲ್ಲಿದ್ದವರ ಶವಗಳನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ. ರಕ್ಷಣಾ ದೋಣಿಗಳು ಕೂಡ ಸ್ಥಳದಲ್ಲಿವೆ" ಎಂದು ತಿಳಿಸಿದ್ದಾರೆ.

ಸೇತುವೆ ತೆರೆಯಲು ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಸಂಸದರು, "ಈ ದುರಂತ ಹೇಗೆ ಸಂಭವಿಸಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು, ಸತ್ತವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು, ಸ್ಥಳೀಯರು ಮತ್ತು ಎನ್‌ಜಿಒಗಳು ಇದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT