ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,326 ಹೊಸ ಪ್ರಕರಣ ಪತ್ತೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,326 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,326 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,53,592ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕಳೆದ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,29,024ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,912ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,723 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,06,656ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,57,218 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,08,82,915 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,63,82,882 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!