ಪ್ರಧಾನಿ ಮೋದಿ 
ದೇಶ

ಗುಜರಾತ್​ ಸೇತುವೆ ದುರಂತ: ನಾಳೆ ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ 

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ.

ಮೊರ್ಬಿ: 141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಮಂಗಳವಾರ ಮಧ್ಯಾಹ್ನ ಮೊರ್ಬಿಗೆ ಭೇಟಿ ನೀಡಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿಗಳ ಕಚೇರಿ ಪ್ರಕಟೆಯಲ್ಲಿ ತಿಳಿಸಿದೆ.

ಗುಜರಾತ್ ರಾಜಧಾನಿ ಗಾಂಧಿನಗರದಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ಮೋರ್ಬಿಯಲ್ಲಿ ಭಾನುವಾರ ನಡೆದ ಈ  ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಇದುವರೆಗೆ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ವಾಯುಪಡೆ, ಸೇನೆ ಮತ್ತು ನೌಕಾಪಡೆಯ ತಂಡಗಳು, ಸ್ಥಳೀಯ ಸಿಬ್ಬಂದಿ ಸಹ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT