ದೇಶ

2002 ಗುಜರಾತ್ ಗಲಭೆ: ಎರಡು ತಿಂಗಳ ನಂತರ ತೀಸ್ತಾ ಸೆಟಲ್ವಾಡ್ ಜೈಲಿನಿಂದ ಬಿಡುಗಡೆ

Lingaraj Badiger

ಅಹಮದಾಬಾದ್: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರು ಶನಿವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೂನ್ 26 ರಂದು ಬಂಧನಕ್ಕೊಳಗಾಗಿದ್ದ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ನಿನ್ನೆ ಮಧ್ಯಂತರ ಜಾಮೀನು ನೀಡಿತ್ತು. ಇಂದು ಅವರನ್ನು ಸಬರಮತಿ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.

ಸುಪ್ರೀಂ ಕೋರ್ಟ್‌ನ ಆದೇಶದ ಪ್ರಕಾರ, ಜಾಮೀನು ಪ್ರಕ್ರಿಯೆಗಳಿಗಾಗಿ ತೀಸ್ತಾ ಅವರನ್ನು ಸೆಷನ್ಸ್ ನ್ಯಾಯಾಧೀಶ ವಿ ಎ ರಾಣಾ ಅವರ ಮುಂದೆ ಹಾಜರುಪಡಿಸಲಾಯಿತು.

ಸೆಷನ್ಸ್ ನ್ಯಾಯಾಲಯವು 25,000 ರೂಪಾಯಿಗಳ ವೈಯಕ್ತಿಕ ಬಾಂಡ್ ಒದಗಿಸುವಂತೆ ಮತ್ತು ತನ್ನ ಅನುಮತಿಯಿಲ್ಲದೆ ಭಾರತ ಬಿಟ್ಟು ಹೋಗದಂತೆ ಸೂಚಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪಟೇಲ್ ಅವರು ತಿಳಿಸಿದ್ದಾರೆ.

SCROLL FOR NEXT