ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತ, 24 ಗಂಟೆಗಳಲ್ಲಿ 33 ಜನರು ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 7,219 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,49,726ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 7,219 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,49,726ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರಕ್ಕೆ ಕೊನೆಗೊಂಡಂತೆ ಕೇರಳದಲ್ಲಿ 8 ಸೇರಿ 24 ಗಂಟೆಗಳ ಅವಧಿಯಲ್ಲಿ 33 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, ಒಟ್ಟು 5,27,965 ಜನರು ಈವರೆಗೆ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 56,745 ಸಕ್ರಿಯ ಪ್ರಕರಣಗಳಿವೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.13ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರ ಶೇ 98.68ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
 

ದೈನಂದಿನ ಪಾಸಿಟಿವಿಟಿ ದರ ಶೇ 1.98ರಷ್ಟಿದ್ದು, ಮರಣ ಪ್ರಮಾಣ 1.19ರಷ್ಟಿದೆ. ಈವರೆಗೆ 4,38,65,016 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 213.01 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!