ನಿತೀಶ್ ಕುಮಾರ್ 
ದೇಶ

ಸೆಪ್ಟೆಂಬರ್ 5ರಂದು ದೆಹಲಿಗೆ ನಿತೀಶ್ ಕುಮಾರ್, ಬಿಜೆಪಿಯೇತರ ನಾಯಕರ ಭೇಟಿ ಸಾಧ್ಯತೆ

ಬಿಜೆಪಿ ನೇತೃತ್ವದ ಎನ್ ಡಿಎನಿಂದ ಹೊರನಡೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೆಪ್ಟೆಂಬರ್ 5 ರಂದು ದೆಹಲಿಗೆ ತೆರಳಲಿದ್ದು, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿರುವ ಅವರು ಈ ಸಂಬಂಧ ವಿವಿಧ ಪಕ್ಷಗಳ ರಾಜಕೀಯ...

ಪಾಟ್ನಾ: ಬಿಜೆಪಿ ನೇತೃತ್ವದ ಎನ್ ಡಿಎನಿಂದ ಹೊರನಡೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೆಪ್ಟೆಂಬರ್ 5 ರಂದು ದೆಹಲಿಗೆ ತೆರಳಲಿದ್ದು, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿರುವ ಅವರು ಈ ಸಂಬಂಧ ವಿವಿಧ ಪಕ್ಷಗಳ ರಾಜಕೀಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಜೆಡಿಯು ಹಿರಿಯ ಮುಖಂಡರು ತಿಳಿಸಿದ್ದಾರೆ.

ಎರಡು ದಿನಗಳ ನಂತರ ನಿತೀಶ್ ಕುಮಾರ್ ಅವರು ದೆಹಲಿಯಿಂದ ಹಿಂತಿರುಗಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಅವರ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಬಿಜೆಪಿ ಜತ ಮೈತ್ರಿ ಕಡಿದುಕೊಂಡ ನಂತರ ನಿತೀಶ್ ಕುಮಾರ್ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂಬುದು ಗಮನಾರ್ಹ. ಇನ್ನು ದೆಹಲಿ ಪ್ರವಾಸದ ವೇಳೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಇದೇ ವೇಳೆ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರನ್ನು ಭೇಟಿಯಾಗುವ ಸಾಧ್ಯತೆಯಿದ್ದು, ಅವರಿಬ್ಬರೂ ಲೋಕದಳದಲ್ಲಿದ್ದಾಗಿನಿಂದ ಪರಿಚಿತರು.

ಉತ್ತರ ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸವಾಲೆಸೆಯುವ ಮೂಲಕ ಚೌತಾಲಾ ಅವರು ತಮ್ಮ ಭಾರತೀಯ ರಾಷ್ಟ್ರೀಯ ಲೋಕದಳವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿ ನಡೆಯುತ್ತಿರುವ ಇಲ್ಲಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಬಿಜೆಪಿ ಪ್ರತಿಪಕ್ಷಗಳ ಶಾಸಕರನ್ನು ಖರೀದಿಸುವ ಬಗ್ಗೆ ಮತ್ತು ಸಾಂವಿಧಾನಿಕತೆಯನ್ನು ಪ್ರಶ್ನಿಸಿದರು.

"ಇದು ಸರಿನಾ? ಇದು ಸಾಂವಿಧಾನಿಕವೇ? ಇದು ಸ್ಥಾಪಿತ ಮಾನದಂಡಗಳಿಗೆ ಅನುಗುಣವಾಗಿದೆಯೇ? ಅವರು ಎಲ್ಲೆಡೆ ಹೀಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2024 ರಲ್ಲಿ ಸಕಾರಾತ್ಮಕ ಜನಾದೇಶಕ್ಕಾಗಿ ಎಲ್ಲಾ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಒಂದಾಗಬೇಕು ಎಂದು ಬಿಹಾರ ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT