ಸೈರಸ್ ಮಿಸ್ಟ್ರಿ 
ದೇಶ

ಮುಂಬೈ:‌ ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನ

ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.  ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮುಂಬೈ: ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು, ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಭಾನುವಾರ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ರವಾನಿಸಲಾಗಿದೆ.

ರತನ್ ಟಾಟಾ ಅವರ ನಂತರ ಸಂಘಟಿತ ಅಧ್ಯಕ್ಷರಾಗಿ ಆಯ್ಕೆಯಾದ ಸೈರಸ್ ಮಿಸ್ತ್ರಿ ಅವರನ್ನು ಭಾರತದ ಅತ್ಯಂತ ಉನ್ನತ ಮಟ್ಟದ ಸಂಸ್ಥೆ ಟಾಟಾ ಸನ್ಸ್ ನಿಂದ 2016 ರಲ್ಲಿ ತೆರವುಗೊಳಿಸಲಾಗಿತ್ತು.

ಸೈರಸ್ ಮಿಸ್ತ್ರಿ ಅವರ ನಿಧನಕ್ಕೆ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ವಿನಾಶಕಾರಿ ಸುದ್ದಿ. ನನ್ನ ಸಹೋದರ ಸೈರಸ್ ಮಿಸ್ತ್ರಿ ನಿಧನರಾಗಿರುವುದನ್ನ ನಂಬಲು ಆಗುತ್ತಿಲ್ಲ. ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸುಪ್ರಿಯಾ ಸುಳೆ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

SCROLL FOR NEXT