ದೆಹಲಿಯ ರಾಜ್ ಪಥ್ ಬಳಿ ಸೆಂಟ್ರಲ್ ವಿಸ್ತಾ ಯೋಜನೆಯ ಕಾಮಗಾರಿ 
ದೇಶ

ದೆಹಲಿಯ ರಾಜ್‌ಪಥ್ ಅನ್ನು ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಲು ಕೇಂದ್ರ ನಿರ್ಧಾರ

ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ಐತಿಹಾಸಿಕ ರಾಜ್‌ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್ ಇನ್ಮುಂದೆ  ಕರ್ತವ್ಯ ಪಥ್ ಎಂದು ಕರೆಯಬೇಕಾಗುತ್ತದೆ. ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಜ್ ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ಐತಿಹಾಸಿಕ ರಾಜ್‌ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್ ಇನ್ಮುಂದೆ  ಕರ್ತವ್ಯ ಪಥ್ ಎಂದು ಕರೆಯಬೇಕಾಗುತ್ತದೆ. ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಜ್ ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್ ಅನ್ನು ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಬ್ರಿಟಿಷರ ಕಾಲವನ್ನು ನೆನಪಿಸುವ ಹೆಸರುಗಳು ಮತ್ತು ಚಿಹ್ನೆಗಳನ್ನು ಮರೆಯಾಗಿಸುವ ಪ್ರಧಾನಿ ನರೇಂದ್ರ ಮೋದಿಯವರ ಒತ್ತಾಯಕ್ಕೆ ಅನುಗುಣವಾಗಿ ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಲಾಗಿತ್ತಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯಿಂದ ರಾಷ್ಟ್ರಪತಿ ಭವನದವರೆಗಿನ ಸಂಪೂರ್ಣ ವಿಸ್ತಾರವನ್ನು ಇನ್ನುಮುಂದೆ ಕರ್ತವ್ಯ ಪಥ್ ಎಂದು ಕರೆಯಲಾಗುತ್ತದೆ. ಆಗಸ್ಟ್ 15 ರಂದು ಕೆಂಪು ಕೋಟೆಯ ಆವರಣದಿಂದ ಮಾಡಿದ ಭಾಷಣದಲ್ಲಿ, ವಸಾಹತುಶಾಹಿ ಮನಸ್ಥಿತಿಗೆ ಸಂಬಂಧಿಸಿದ ಚಿಹ್ನೆಗಳ ನಿರ್ಮೂಲನೆಗೆ ಪ್ರಧಾನಿ ಮೋದಿ ಒತ್ತು ನೀಡಿದ್ದರು.

ಅದರಂತೆ, ಕಳೆದ ವಾರ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಉಡಾವಣೆ ಸಂದರ್ಭದಲ್ಲಿ ನೌಕಾಪಡೆಯು ತನ್ನ ಧ್ವಜವನ್ನು ಬದಲಾಯಿಸಿತು. ಈ ಹಿಂದೆ ಪ್ರಧಾನಿ ನಿವಾಸವಿರುವ ರಸ್ತೆಯ ಹೆಸರನ್ನು ರೇಸ್ ಕೋರ್ಸ್ ರಸ್ತೆಯಿಂದ ಲೋಕ ಕಲ್ಯಾಣ ಮಾರ್ಗ ಎಂದು ಬದಲಾಯಿಸಲಾಗಿತ್ತು.

ಇದೀಗ ರಾಜ್‌ಪಥ್ ಅನ್ನು ಕರ್ತವ್ಯ ಪಥ್  ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದು, ಈ ಸಂಬಂಧ ಸೆಪ್ಟೆಂಬರ್ 7 ರಂದು ನ್ಯೂ ಡೆಲ್ಲಿ ಮುನಿಸಿಪಲ್ ಕೌನ್ಸಿಲ್ ವಿಶೇಷ ಸಭೆಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT