ದೇಶ

ಕೋವಿಡ್-19: ಕೇರಳದಲ್ಲಿ ಏಳು ಮಂದಿ ಸೇರಿದಂತೆ ದೇಶದಾದ್ಯಂತ 16 ಸಾವು, 5,910 ಹೊಸ ಪ್ರಕರಣ

Ramyashree GN

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 5,910 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,62,445ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,974 ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ ಕೇರಳದಲ್ಲಿ ಏಳು ಮಂದಿ ಸೇರಿದಂತೆ 16 ಜನರು ಸಾವಿಗೀಡಾಗಿದ್ದಾರೆ. ಈವರೆಗೆ ದೇಶದಾದ್ಯಂತ 5,28,007 ನಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.12ರಷ್ಟು ಸಕ್ರಿಯ ಪ್ರಕರಣಗಳಿದ್ದು,ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.69ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 2.60ರಷ್ಟಿದ್ದರೆ, ಮರಣ ಪ್ರಮಾಣ 1.19ರಷ್ಟಿದೆ. ಸದ್ಯ ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 213.52 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

SCROLL FOR NEXT