ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಮನೆ ಹೊರತುಪಡಿಸಿ ದೇಶದ 30 ಸ್ಥಳಗಳಲ್ಲಿ ಇ.ಡಿ ದಾಳಿ

Ramyashree GN

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಯುತ್ತಿರುವ ತನಿಖೆಯ ಭಾಗವಾಗಿ ದೇಶದಾದ್ಯಂತ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.
ಮೂಲಗಳ ಪ್ರಕಾರ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಹೊರತುಪಡಿಸಿ ದೇಶದ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ.

'ನಾವು ಉತ್ತರ ಪ್ರದೇಶದ ಲಖನೌ, ಹರಿಯಾಣದ ಗುರುಗ್ರಾಮ, ಚಂಡೀಗಢ, ಮುಂಬೈ, ಹೈದರಾಬಾದ್ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದೇವೆ. ಇಂದು ಮುಂಜಾನೆ ಆರಂಭವಾದ ಶೋಧ ಕಾರ್ಯಗಳು ನಡೆಯುತ್ತಿವೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅವರು ಹೇಳಿದರು.

ಇ.ಡಿ ಪ್ರಕರಣವು ಕೇಂದ್ರೀಯ ತನಿಖಾ ದಳದ (ಸಿಬಿಐ) ಎಫ್‌ಐಆರ್ ಅನ್ನು ಆಧರಿಸಿ ನಡೆಯುತ್ತಿದೆ.

ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಮನೀಶ್ ಸಿಸೋಡಿಯಾ ಅವರನ್ನು ನಂಬರ್ ಒನ್ ಆರೋಪಿಯನ್ನಾಗಿ ಮಾಡಿದೆ. ಸಿಬಿಐನ ಎಫ್‌ಐಆರ್ ಅನ್ನು ಐಪಿಸಿ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 477-ಎ (ಖಾತೆಗಳ ಸುಳ್ಳು) ಅಡಿಯಲ್ಲಿ ದಾಖಲಿಸಲಾಗಿದೆ. ಅಬಕಾರಿ ನಿಯಮಗಳನ್ನು ಉಲ್ಲಂಘಿಸಿ ನೀತಿ ನಿಯಮಗಳನ್ನು ರಚಿಸಿ ಮದ್ಯದ ಉದ್ಯಮಿಗಳಿಗೆ 30 ಕೋಟಿ ವಿನಾಯಿತಿ ನೀಡಲಾಗಿದೆ ಎಂಬ ಆರೋಪ ಅವರ ಮೇಲಿದೆ. ಪರವಾನಗಿ ಹೊಂದಿರುವವರಿಗೆ ಅವರ ಇಚ್ಛೆಯ ಪ್ರಕಾರ ವಿಸ್ತರಣೆಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.  ಮಾಡಲಾಗಿದೆ.

‘ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಅಂದಿನ ಅಬಕಾರಿ ಆಯುಕ್ತ ಅರ್ವಾ ಗೋಪಿ ಕೃಷ್ಣ, ಅಬಕಾರಿ ಇಲಾಖೆಯ ಅಂದಿನ ಉಪ ಆಯುಕ್ತ ಆನಂದ್ ತಿವಾರಿ ಮತ್ತು ಅಬಕಾರಿ ಇಲಾಖೆ ಸಹಾಯಕ ಆಯುಕ್ತ ಪಂಕಜ್ ಭಟ್ನಾಗರ್ 2021-22ನೇ ಸಾಲಿನ ಅಬಕಾರಿ ನೀತಿಗೆ ಸಂಬಂಧಿಸಿದ ಶಿಫಾರಸು ಮಾಡುವಲ್ಲಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಸಿಬಿಐ ಆರೋಪಿಸಿದೆ.

SCROLL FOR NEXT