ನಿತೀಶ್ ಕುಮಾರ್, ಸೀತಾರಾಂ ಯೆಚೂರಿ 
ದೇಶ

ಪ್ರಧಾನಿ ಹುದ್ದೆಯ ಅಪೇಕ್ಷೆ ಇಲ್ಲ, ವಿಪಕ್ಷಗಳನ್ನು ಒಗ್ಗೂಡಿಸುವ ಸಂದರ್ಭ ಇದು: ನಿತೀಶ್ ಕುಮಾರ್

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ನಾಯಕತ್ವ ವಹಿಸಿಕೊಳ್ಳುವ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದಾರೆ ಎಂಬ ಊಹಾಪೋಹಗಳ ನಡುವೆ ತಾನೂಪ್ರಧಾನಿ ಹುದ್ದೆಯ ಹಕ್ಕುದಾರನೂ ಅಲ್ಲ ಅಥವಾ ಅದರ ಅಪೇಕ್ಷೆಯೂ ಇಲ್ಲ ಎಂದು ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ನಾಯಕತ್ವ ವಹಿಸಿಕೊಳ್ಳುವ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದಾರೆ ಎಂಬ ಊಹಾಪೋಹಗಳ ನಡುವೆ ತಾನೂ ಪ್ರಧಾನಿ ಹುದ್ದೆಯ ಹಕ್ಕುದಾರನೂ ಅಲ್ಲ ಅಥವಾ ಅದರ ಅಪೇಕ್ಷೆಯೂ ಇಲ್ಲ ಎಂದು ಅವರು ಮಂಗಳವಾರ ಹೇಳಿದ್ದಾರೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಎಡಪಕ್ಷಗಳು, ಕಾಂಗ್ರೆಸ್ ಹಾಗೂ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ, ವಿಪಕ್ಷಗಳನ್ನು ಒಗ್ಗೂಡಿಸುವ ಸಂದರ್ಭ ಇದಾಗಿದೆ ಎಂದರು.

ಚಿಕ್ಕಂದಿನಿಂದಲೂ ಸಿಪಿಐ (ಎಂ) ನೊಂದಿಗೆ ಧೀರ್ಘ ಸಂಬಂಧ ಹೊಂದಿದ್ದೇನೆ. ನೀವೆಲ್ಲರೂ ನನ್ನನ್ನು ನೋಡಿಲ್ಲ, ಆದರೆ ನಾನು ದೆಹಲಿಗೆ ಬಂದಾಗಲೆಲ್ಲಾ ನಾನು ಈ ಕಚೇರಿಗೆ ಬರುತ್ತಿದ್ದೆ. ಇಂದು ನಾವೆಲ್ಲರೂ ಮತ್ತೆ ಒಟ್ಟಿಗೆ ಇದ್ದೇವೆ. ಎಲ್ಲಾ ಎಡಪಕ್ಷಗಳು, ಪ್ರಾದೇಶಿಕ ಪಕ್ಷಗಳು, ಕಾಂಗ್ರೆಸ್ ಅನ್ನು ಒಗ್ಗೂಡಿಸುವುದು ನಮ್ಮ ಸಂಪೂರ್ಣ ಗಮನ ನೀಡಲಾಗುವುದು,ಒಂದುವೇಳೆ ನಾವೆಲ್ಲರೂ ಒಗ್ಗೂಡಿದರೆ ಇದು ದೊಡ್ಡ ವಿಷಯವಾಗಲಿದೆ ಎಂದು ಅವರು ಹೇಳಿದರು.  ಪ್ರಧಾನಿಯಾಗುವ  ಆಕಾಂಕ್ಷೆ ಕುರಿತು  ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್  "ಇದು ತಪ್ಪು. ನಾನು ಆ ಹುದ್ದೆಗೆ ಹಕ್ಕುದಾರನೂ ಅಲ್ಲ, ಅದರ ಅಪೇಕ್ಷೆಯೂ ಇಲ್ಲ ಎಂದು ಹೇಳಿದರು. 

 ನಿತೀಶ್ ಕುಮಾರ್ ಪ್ರತಿಪಕ್ಷಗಳ ಕೂಟಕ್ಕೆ ವಾಪಸ್ ಆಗಿದ್ದು, ಬಿಜೆಪಿ ವಿರುದ್ಧದ ಹೋರಾಟದ ಭಾಗವಾಗಬೇಕೆಂಬ ಅವರ ಬಯಕೆ ಭಾರತದ ರಾಜಕೀಯಕ್ಕೆ ಉತ್ತಮ ಸಂಕೇತವಾಗಿದೆ ಎಂದು ಯೆಚೂರಿ ಹೇಳಿದ್ದಾರೆ. ಎಲ್ಲಾ ಪಕ್ಷಗಳನ್ನು ಒಗ್ಗೂಡಿಸುವುದು ಮೊದಲ ಅಜೆಂಡಾ, ಪ್ರಧಾನಿ ಅಭ್ಯರ್ಥಿ ನಿರ್ಧರಿಸಿಲ್ಲ, ಸಮಯ ಬಂದಾಗ ಪ್ರಧಾನಿ ಅಭ್ಯರ್ಥಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು,

ಸೋಮವಾರ ನವದೆಹಲಿಗೆ ಆಗಮಿಸಿದ ನಿತೀಶ್ ಕುಮಾರ್  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಶರದ್ ಪವಾರ್, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಸೇರಿದಂತೆ ಹಲವು ಮುಖಂಡರನ್ನು ಭೇಟಿಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT