ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ 5,379 ಹೊಸ ಪ್ರಕರಣ, ಎಲ್ಲಾ ರಾಜ್ಯಗಳ ಪೈಕಿ ಕೇರಳದಲ್ಲಿಯೇ ಅಧಿಕ ಸಾವು

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 5,379 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,44,72,241ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 5,379 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,44,72,241ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 50,594 ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ ಕೇರಳದಲ್ಲಿ 11 ಜನರು ಸೇರಿದಂತೆ ದೇಶದಲ್ಲಿ 27 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಈವರೆಗೆ 5,28,057 ಜನರು ಸಾವಿಗೀಡಾಗಿದ್ದಾರೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.70 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

24 ಗಂಟೆಗಳ ಅವಧಿಯಲ್ಲಿ 7,094 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 4,38,93,590 ಜನರು ಇದುವರೆಗೆ ಚೇತರಿಸಿಕೊಂಡಿದ್ದಾರೆ. ಈ ಮಧ್ಯೆ ದೈನಂದಿನ ಪಾಸಿಟಿವಿಟಿ ದರ ಶೇ 1.67ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 213.91 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT