ದೇಶ

ಕೋವಿಡ್-19: ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಕೇರಳದಲ್ಲಿ 14 ಸೇರಿ 33 ಮಂದಿ ಸಾವು

Ramyashree GN

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,395 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,78,636ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 50,342ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 14 ಜನರು ಸೇರಿದಂತೆ 33 ಮಂದಿ ಸಾವಿಗೀಡಾಗಿದ್ದು, ಒಟ್ಟು 5,28,090 ಮಂದಿ ಮೃತಪಟ್ಟಿದ್ದಾರೆ.

ಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11 ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.70 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಇದೇ ವೇಳೆ ದೈನಂದಿನ ಪಾಸಿಟಿವಿಟಿ ದರ ಶೇ 1.96ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.88 ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 214.27 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

SCROLL FOR NEXT