ಪ್ರತ್ಯಕ್ಷ ದೃಶ್ಯ 
ದೇಶ

ದೆಹಲಿ: ಸ್ಕೂಟರ್ ಒರೆಸಲು ತ್ರಿವರ್ಣಧ್ವಜ ಬಳಸಿದ 52 ವರ್ಷದ ವ್ಯಕ್ತಿ; ವಿಡಿಯೋ ವೈರಲ್!

ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ನವದೆಹಲಿ: ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿ ಉತ್ತರ ಘೋಂಡಾ ಪ್ರದೇಶದ ನಿವಾಸಿ ಎಂದು ಅವರು ತಿಳಿಸಿದ್ದಾರೆ. ನೆರೆಮನೆಯವರು ಇದನ್ನು ಚಿತ್ರೀಕರಿಸಿದ್ದು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ನಂತರ ವಿಷಯವು ಬೆಳಕಿಗೆ ಬಂದಿದೆ.

ವೀಡಿಯೊದಲ್ಲಿ ವ್ಯಕ್ತಿಯು ತನ್ನ ಬಿಳಿ ಸ್ಕೂಟರ್ ಅನ್ನು ರಾಷ್ಟ್ರಧ್ವಜದಿಂದ ಸ್ವಚ್ಛಗೊಳಿಸುವ ಮತ್ತು ಧೂಳು ಹೊಡೆಯುತ್ತಿರುವುದು ಕಾಣಬಹುದು. ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, 1971ರ ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯಿದೆ ಕಲಂ 2ರ ಅಡಿಯಲ್ಲಿ ಭಜನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವ್ಯಕ್ತಿ ಬಳಸಿದ ಧ್ವಜ ಮತ್ತು ಆತನ ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ವೇಳೆ ವ್ಯಕ್ತಿ ಇದು ಉದ್ದೇಶಪೂರ್ವಕವಾಗಿ ಮಾಡಿದಲ್ಲ ಎಂದು ಹೇಳಿದ್ದಾರೆ. ಈ ಕುರಿತಂತೆ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?