ಎನ್ಐಎ 
ದೇಶ

ಪಿಎಫ್ಐ ಪ್ರಕರಣ: ತಮಿಳುನಾಡು, ಕರ್ನಾಟಕ ಮತ್ತು ಬಿಹಾರದಲ್ಲಿ ಎನ್ಐಎ ದಾಳಿ

ಪಾಟ್ನಾದಲ್ಲಿ ಶಂಕಿತ ಉಗ್ರ ಸಂಘಟನೆಗಳೊಂದಿಗೆ ಪಿಎಫ್‌ಐ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಗುರುವಾರ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, "ನಿಷೇಧಿತ" ವಸ್ತುಗಳನ್ನು ವಶಪಡಿಸಿಕೊಂಡಿದೆ...

ನವದೆಹಲಿ: ಪಾಟ್ನಾದಲ್ಲಿ ಶಂಕಿತ ಉಗ್ರ ಸಂಘಟನೆಗಳೊಂದಿಗೆ ಪಿಎಫ್‌ಐ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಗುರುವಾರ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, "ನಿಷೇಧಿತ" ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಫೆಡರಲ್ ಏಜೆನ್ಸಿಯ ವಕ್ತಾರರು ತಿಳಿಸಿದ್ದಾರೆ.

ಬಿಹಾರದ ನಳಂದ, ಕತಿಹಾರ್, ಅರಾರಿಯಾ, ಮಧುಬನಿ, ಪಾಟ್ನಾ, ವೈಶಾಲಿ, ದರ್ಬಂಗಾ, ಮುಜಾಫರ್‌ಪುರ ಮತ್ತು ಸರನ್ ಜಿಲ್ಲೆಗಳಲ್ಲಿ ಆರೋಪಿಗಳು ಶಂಕಿತರೊಂದಿಗೆ ಸಂಬಂಧ ಹೊಂದಿರುವ 20 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) "ದೇಶ ವಿರೋಧಿ ಚಟುವಟಿಕೆಗಳಲ್ಲಿ" ತೊಡಗಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು ತಮಿಳುನಾಡಿನ ಶಿವಗಂಗಾ ಜಿಲ್ಲೆ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಶೋಧ ನಡೆಸಿದೆ.

"ಆರೋಪಿಗಳು ಮತ್ತು ಶಂಕಿತರ ಆವರಣದಲ್ಲಿ ಇಂದು ನಡೆಸಿದ ಶೋಧಗಳಲ್ಲಿ, ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳು ಸೇರಿದಂತೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್