ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ 
ದೇಶ

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣಗೊಳಿಸಿ, ಕರ್ತವ್ಯ ಪಥ್ ಉದ್ಘಾಟಿಸಿದ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಈ ಪ್ರತಿಮೆಯು ಕೇಂದ್ರ ಸರ್ಕಾರದ 13,450-ಕೋಟಿ ರೂಪಾಯಿ ಮೌಲ್ಯದ ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿದೆ. ಇದು ಹೊಸ ಸಂಸತ್ತಿನ ಕಟ್ಟಡ, ಹೊಸ ಕಚೇರಿ ಮತ್ತು ಪ್ರಧಾನಿ ಹಾಗೂ ಉಪ ರಾಷ್ಟ್ರಪತಿಗಳ ನಿವಾಸ, ಹೊಸ ಸಚಿವಾಲಯದ ಕಟ್ಟಡಗಳನ್ನು ಹೊಂದಿರುತ್ತದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಏಕಶಿಲೆಯ ಮೇಲೆ ಕೆತ್ತಲಾಗಿದೆ.

ಬಳಿಕ ಪ್ರಧಾನಿ ಮೋದಿ ಅವರು ದೆಹಲಿಯ ಹೃದಯಭಾಗದಲ್ಲಿರುವ ಇಂಡಿಯಾ ಗೇಟ್ ಬಳಿಯ ಕರ್ತವ್ಯ ಪಥ್ ಮಾರ್ಗವನ್ನು ಉದ್ಘಾಟಿಸಿದರು. ಕೇಂದ್ರ ಸರ್ಕಾರ ರಾಜ್ ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್ ಅನ್ನು ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಿದೆ.

ಕೇಂದ್ರ ಸರ್ಕಾರ ರಾಜ್ ಪಥ್ ಮಾರ್ಗವನ್ನು ಸೆಂಟ್ರಲ್ ವಿಸ್ತಾ ಲಾನ್ಸ್ ಯೋಜನೆ ಅಡಿ ಅಭಿವೃದ್ಧಿಗೊಳಿಸಿ ಅದಕ್ಕೆ ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!