ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 6,093 ಹೊಸ ಪ್ರಕರಣ, ಕೇರಳದಲ್ಲಿ 13 ಸೇರಿ 31 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,093 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,84,729ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,093 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,84,729ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 49,636ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 13 ಜನರು ಸೇರಿದಂತೆ 31 ಮಂದಿ ಸಾವಿಗೀಡಾಗಿದ್ದು, ಒಟ್ಟು 5,28,090 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11 ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.70 ರಷ್ಟಿದೆ. ಸದ್ಯ ದೇಶದಾದ್ಯಂತ 4,39,06,972 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಇದೇ ವೇಳೆ ದೈನಂದಿನ ಪಾಸಿಟಿವಿಟಿ ದರ ಶೇ 1.93ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.88 ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 214.55 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ