ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ..! ರಾಹುಲ್ ಗಾಂಧಿ ಹೇಳಿದ್ದೇನು?

ಮತ್ತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಕುರಿತು ರಾಹುಲ್ ಗಾಂಧಿ ಮಹತ್ವದ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿ
Srinivasa Murthy VN
Updated On : 9 Sept 2022, 4:03 pm

ನವದೆಹಲಿ: ಮತ್ತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಕುರಿತು ರಾಹುಲ್ ಗಾಂಧಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿರುವಂತೆಯೇ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ತಾವು ತಮ್ಮ ನಿರ್ಧಾರವನ್ನು ತೆಗೆದುಕೊಂಡಿದ್ದು, ಚುನಾವಣೆ ನಡೆದಾಗ ಎಲ್ಲವೂ ತಿಳಿಯಲಿದೆ ಎಂದು ಹೇಳಿದ್ದಾರೆ.

'ಪಕ್ಷದ ಮುಂದಿನ ಅಧ್ಯಕ್ಷರಾಗುವ ಬಗ್ಗೆ ತಮ್ಮ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದು, ಚುನಾವಣೆ ನಡೆದಾಗ ಮಾತ್ರ ಉತ್ತರಿಸುತ್ತೇನೆ' ಎಂದು ಹೇಳಿದ್ದಾರೆ.

Advertisement

Advertisement

ಇದನ್ನೂ ಓದಿ: ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು; ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಶಶಿ ತರೂರ್ ಸ್ಪರ್ಧೆ ಬಗ್ಗೆ ಕಾಂಗ್ರೆಸ್

2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುವಿರೇ ಎಂಬ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನು ನನ್ನ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ; ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದು, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ನಾನು ಉತ್ತರಿಸುತ್ತೇನೆ ಎಂದರು.

"ಪಕ್ಷದ ಚುನಾವಣೆಗಳು ನಡೆಯುವಾಗ ನಾನು ಅಧ್ಯಕ್ಷನಾಗುತ್ತೇನೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗುತ್ತದೆ, ದಯವಿಟ್ಟು ಆ ದಿನಕ್ಕಾಗಿ ಕಾಯಿರಿ" ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ದೇಶ ವಿಭಜಿಸುತ್ತಿರುವ ಬಿಜೆಪಿ, ಆರೆಸ್ಸೆಸ್ ನಿಂದ ನಮ್ಮ ತ್ರಿವರ್ಣ ಧ್ವಜದ ಮೇಲೆ ದಾಳಿ: ರಾಹುಲ್ ಗಾಂಧಿ

ಇದೇ ವೇಳೆ ತಾವು ಭಾರತ್ ಜೋಡೋ ಯಾತ್ರೆಯನ್ನು (ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ "ಭಾರತ್ ಜೋಡೋ ಯಾತ್ರೆ") ಮುನ್ನಡೆಸುತ್ತಿಲ್ಲ ಮತ್ತು ಅದರಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಅವರು ಹೇಳಿದರು. ದೇಶಕ್ಕಾಗಿ ದುಡಿಯುವುದು ಪ್ರತಿಪಕ್ಷದ ಪ್ರತಿಯೊಬ್ಬರ ಜವಾಬ್ದಾರಿ ಎಂದೂ ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement