ದೇಶ

ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ASI ಆತ್ಮಹತ್ಯೆ

Srinivas Rao BV

ಚಂಡೀಗಢ: ಹಿರಿಯ ಅಧಿಕಾರಿಗಳಿಂದ ಅವಮಾನವಾಗಿದೆ ಎಂದು ಆರೋಪಿಸಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪೊಲೀಸ್ ಠಾಣೆಯೊಳಗೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ ನಲ್ಲಿ ವರದಿಯಾಗಿದೆ. ಸಾವಿಗೂ ಮುನ್ನ ಅವರು ವೀಡಿಯೊವನ್ನು ಸಹ ರೆಕಾರ್ಡ್ ಮಾಡಿದ್ದು ಅದರಲ್ಲಿ ಅವರು ತಮ್ಮ ಜೀವನವನ್ನು ಕೊನೆಗೊಳಿಸಲು ಕಾರಣವನ್ನು ಹಂಚಿಕೊಂಡಿದ್ದಾರೆ.

ಹೋಶಿಯಾರ್‌ಪುರದ ಹರಿಯಾಣಾ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಸತೀಶ್ ಕುಮಾರ್ ಗುರುವಾರ ತಪಾಸಣೆಯ ವೇಳೆ ತಾಂಡಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಓಂಕಾರ್ ಸಿಂಗ್ ತನ್ನ ಮೇಲೆ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನನ್ನು ಹೀಗೆ ಅವಮಾನಿಸುವುದಕ್ಕಿಂತ ಸುಮ್ಮನೆ ಗುಂಡು ಹಾರಿಸಿದ್ದರೆ ಚೆನ್ನಾಗಿರುತ್ತಿತ್ತು’ ಎಂದು ಹೇಳಿದ್ದು ವಿಡಿಯೋದಲ್ಲಿ ಕೇಳಿಬಂದಿದೆ.

ಮರುದಿನ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳಲ್ಲಿ ವಿಚಾರಣೆಗೆ ನಿಗದಿಪಡಿಸಲಾದ ಪ್ರಕರಣಗಳ ಬಗ್ಗೆ ಅವರು ನನ್ನನ್ನು ಕೇಳಿದರು. ನಾನು ವ್ಯವಹರಿಸುತ್ತಿರುವ ಒಂದೇ ಒಂದು ಪ್ರಕರಣವಿದೆ ಮತ್ತು ಇತರ ಪ್ರಕರಣಗಳ ವಿವರಗಳನ್ನು ಸಂಬಂಧಪಟ್ಟ ತನಿಖಾಧಿಕಾರಿಗಳಿಂದ ಪಡೆಯಬಹುದು ಎಂದು ನಾನು ಅವರಿಗೆ ಹೇಳಿದೆಎಂದು ವಿಡಿಯೋದಲ್ಲಿ ಪ್ರತಿಪಾದಿಸಿದ್ದಾರೆ.

ನಂತರ ಅವರು ನನ್ನನ್ನು ಅವಮಾನಿಸಿದರು. ಅದು ಅಲ್ಲಿಗೇ ನಿಲ್ಲಲಿಲ್ಲ. ಅವರು ದಾಖಲೆ ಪುಸ್ತಕದಲ್ಲಿ ನನ್ನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದಿರುವ ಸತೀಶ್ ಕುಮಾರ್ ಘಟನೆಯ ನಂತರ ಅವರು ತಮ್ಮ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್‌ಎಚ್‌ಒ ಅವರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ. ಹೋಶಿಯಾರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ತಾಜ್ ಸಿಂಗ್ ಚಾಹಲ್ ಅವರು ಕಿರಿಯ ಪೊಲೀಸರಿಗೆ ಯಾವುದೇ ಸಮಸ್ಯೆ ಎದುರಾದರೆ ಅವರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

SCROLL FOR NEXT