ಸಾಂದರ್ಭಿಕ ಚಿತ್ರ 
ದೇಶ

ಲಖಿಂಪುರ ಖೇರಿ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಐವರ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖೀಂಪುರ ಖೇರಿ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ಮನೆಗೆ ಬಂದು ನಡೆದ ಘಟನೆಯನ್ನು ಪೋಷಕರಿಗೆ ತಿಳಿಸಿದ್ದು ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಮೊಹಮ್ಮದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸಿಂಗ್ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಾಲಕಿಯ ಸಹೋದರ ಅದೇ ಗ್ರಾಮದ ಐವರನ್ನು ಹೆಸರಿಸಿ ಪೊಲೀಸರಿಗೆ ದೂರು ನೀಡಿದ್ದು, ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.

' ಶನಿವಾರ ತಡರಾತ್ರಿ ಮೊಹಮ್ಮದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲಿನ ಅತ್ಯಾಚಾರದ ಬಗ್ಗೆ ಮಾಹಿತಿ ಸಿಕ್ಕಿತ್ತು. ಶೀಘ್ರವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು' ಎಂದು ಸಿಂಗ್ ಹೇಳಿದರು.

ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಹೇಳಿಕೆಗಳಲ್ಲಿ, ಹುಡುಗಿ ತನ್ನ ಗ್ರಾಮದವರಾದ ಮತ್ತು ಈ ಹಿಂದೆ ತನಗೆ ಪರಿಚಯವಿದ್ದ ನಾಲ್ವರು ಆರೋಪಿಗಳ ಗುರುತನ್ನು ಬಹಿರಂಗಪಡಿಸಿದಳು ಎಂದು ಅಧಿಕಾರಿ ಹೇಳಿದರು.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!