ಅಮಿತ್ ಶಾ ಮಫ್ಲರ್ ಬೆಲೆ ರೂ 80,000: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಫ್ಲರ್ ಬೆಲೆ 80,000 ರೂಪಾಯಿ ಮತ್ತು ಕೇಸರಿ ಪಕ್ಷದ ನಾಯಕರು 2.5 ಲಕ್ಷ ರೂಪಾಯಿ ಮೌಲ್ಯದ ಸನ್ ಗ್ಲಾಸ್ ಧರಿಸುತ್ತಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್...
ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಫ್ಲರ್ ಬೆಲೆ 80,000 ರೂಪಾಯಿ ಮತ್ತು ಕೇಸರಿ ಪಕ್ಷದ ನಾಯಕರು 2.5 ಲಕ್ಷ ರೂಪಾಯಿ ಮೌಲ್ಯದ ಸನ್ ಗ್ಲಾಸ್ ಧರಿಸುತ್ತಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟಿ-ಶರ್ಟ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿಗೆ ಸೋಮವಾರ ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ರಾಹುಲ್ ಗಾಂಧಿ ಟೀ ಶರ್ಟ್ ಮೇಲೆ ಬಿಜೆಪಿ ಕೆಂಗಣ್ಣು; ಮೋದಿ ಸೂಟ್ ಬೆಲೆ 10 ಲಕ್ಷ ರೂ.: ಕಾಂಗ್ರೆಸ್ ತಿರುಗೇಟು
'ಭಾರತ್ ಜೋಡೋ ಯಾತ್ರೆ'ಗೆ ಜನರಿಂದ "ಅಸಾಧಾರಣ ಪ್ರತಿಕ್ರಿಯೆ" ಸಿಗುತ್ತಿರುವುದರಿಂದ ಬಿಜೆಪಿ ಆತಂಕಕ್ಕೆ ಒಳಗಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಅವರು ರಾಹುಲ್ ಗಾಂಧಿಯವರ ಟಿ-ಶರ್ಟ್ ಬಗ್ಗೆ ಮಾತನಾಡುತ್ತಿದ್ದಾರೆ. ಸ್ವತಃ ಬಿಜೆಪಿ ನಾಯಕರು 2.5 ಲಕ್ಷ ರೂ. ಸನ್ ಗ್ಲಾಸ್ ಮತ್ತು 80,000 ರೂ. ಮಫ್ಲರ್ ಧರಿಸುತ್ತಾರೆ. ಕೇಂದ್ರ ಗೃಹ ಸಚಿವರು ಧರಿಸುವ ಮಫ್ಲರ್ ಬೆಲೆ 80,000 ರೂ. ಗೆಹ್ಲೋಟ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
"ಬಿಜೆಪಿಯವರು ಟಿ-ಶರ್ಟ್ನಲ್ಲಿ ರಾಜಕೀಯ ಮಾಡುತ್ತಿದ್ದಾರೆ" ಎಂದು ರಾಜಸ್ಥಾನ ಸಿಎಂ ವಾಗ್ದಾಳಿ ನಡೆಸಿದ್ದಾರೆ.
ಕಳೆದ ವಾರ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು 41,000 ರೂ.ಗಿಂತ ಹೆಚ್ಚು ಬೆಲೆಯ ಟಿ- ಶರ್ಟ್ ಧರಿಸಿದ್ದರು ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.