ಆಮ್ ಆದ್ಮಿ ಪಕ್ಷ ನಾಯಕ ಹಾಗೂ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ 
ದೇಶ

‘ಆಪ್ ಕಚೇರಿ ಮೇಲೆ ಅಕ್ರಮ ದಾಳಿಯ ಬಗ್ಗೆ ಸಾಕ್ಷಿ ಇದೆ’: ಎಎಪಿ ನಾಯಕ ಸೌರಭ್ ಭಾರದ್ವಾಜ್

ಅಹಮದಾಬಾದ್‌ನಲ್ಲಿರುವ ತಮ್ಮ ಪಕ್ಷದ ಕಚೇರಿ ಮೇಲೆ ಪೊಲೀಸರು ನಡೆಸಿದ "ಅಕ್ರಮ" ದಾಳಿಯ ಬಗ್ಗೆ ನನ್ನ ಬಳಿ ಸಾಕ್ಷ್ಯ ಇದೆ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶೋಧದ ಬಗ್ಗೆ ನನ್ನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು...

ನವದೆಹಲಿ: ಅಹಮದಾಬಾದ್‌ನಲ್ಲಿರುವ ತಮ್ಮ ಪಕ್ಷದ ಕಚೇರಿ ಮೇಲೆ ಪೊಲೀಸರು ನಡೆಸಿದ "ಅಕ್ರಮ" ದಾಳಿಯ ಬಗ್ಗೆ ನನ್ನ ಬಳಿ ಸಾಕ್ಷ್ಯ ಇದೆ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶೋಧದ ಬಗ್ಗೆ ನನ್ನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧರಿದ್ದರೆ ಸಾಕ್ಷ್ಯಗಳನ್ನು ಬಹಿರಂಗಪಡಿಸುತ್ತೇನೆ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು ಸೋಮವಾರ ಹೇಳಿದ್ದಾರೆ.

ಭಾನುವಾರ ಸಂಜೆ ಅಹಮದಾಬಾದ್‌ನಲ್ಲಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಕಚೇರಿಯ ಮೇಲೆ ಯಾವುದೇ ದಾಳಿ ನಡೆಸಿಲ್ಲ ಎಂದು ಗುಜರಾತ್ ಪೊಲೀಸರು ಹೇಳಿದ ನಂತರ ಆಮ್ ಆದ್ಮಿ ಪಕ್ಷ ದಾಳಿ ನಡೆದಿದೆ ಎಂದು ಹೇಳಿದೆ.

ಇಂದು ಎಎಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರದ್ವಾಜ್ ಅವರು, "ಅಹಮದಾಬಾದ್‌ನಲ್ಲಿರುವ ಪಕ್ಷದ ಕಚೇರಿಯ ಮೇಲೆ ನಿನ್ನೆ ಪೊಲೀಸರು ಅಕ್ರಮವಾಗಿ ದಾಳಿ ನಡೆಸಿದ್ದಾರೆ. ಅವರು ಯಾವುದೇ ವಾರಂಟ್ ಅಥವಾ ನ್ಯಾಯಾಲಯದ ಆದೇಶವಿಲ್ಲದೆ ಬಲವಂತವಾಗಿ ಕಚೇರಿಗೆ ಪ್ರವೇಶಿಸಿ ಎರಡು ಗಂಟೆಗಳ ಕಾಲ ಶೋಧ ನಡೆಸಿದರು" ಎಂದು ಆರೋಪಿಸಿದ್ದಾರೆ.

ಪೊಲೀಸ್ ತಂಡವು ಎಲ್ಲಾ ಕಂಪ್ಯೂಟರ್‌ಗಳನ್ನು ಪರಿಶೀಲಿಸಿತು, ಪಕ್ಷದ ಕಚೇರಿಯಲ್ಲಿ ಇರಿಸಲಾದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿತು ಮತ್ತು ಅಲ್ಲಿದ್ದ ಜನರನ್ನು ವಿಚಾರಣೆ ನಡೆಸಿತು ಎಂದು ಅವರು ಹೇಳಿದ್ದಾರೆ.

ಆದರೆ ಪಕ್ಷದ ಕಚೇರಿಯಲ್ಲಿ ನಡೆಸಿದ "ಅಕ್ರಮ" ಶೋಧದ ಸಮಯದಲ್ಲಿ ಎಎಪಿ ವಿರುದ್ಧ ಅವರಿಗೆ ಏನನ್ನೂ ಪತ್ತೆಯಾಗದ ಕಾರಣ ಅಹಮದಾಬಾದ್ ಪೊಲೀಸರು ಈಗ ಅದನ್ನು ನಿರಾಕರಿಸುತ್ತಿದ್ದಾರೆ ಎಂದು ಭಾರದ್ವಾಜ್  ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?