ಅರೆಪ್ರಜ್ಞಾವಸ್ಥೆಯಲ್ಲಿ ನಡುರಸ್ತೆಯಲ್ಲಿ ನಿಂತ ಯುವತಿಯ ವಿಡಿಯೋ ವೈರಲ್ 
ದೇಶ

ಡ್ರಗ್ಸ್ ಸೇವನೆ: ಅರೆಪ್ರಜ್ಞಾವಸ್ಥೆಯಲ್ಲಿ ನಡುರಸ್ತೆಯಲ್ಲಿ ನಿಂತ ಯುವತಿಯ ವಿಡಿಯೋ ವೈರಲ್, ತನಿಖೆಗೆ ಆದೇಶ

ಡ್ರಗ್ಸ್ ಪ್ರಭಾವಕ್ಕೊಳಗಾದ ಯುವತಿಯೊಬ್ಬಳು ನಡುರಸ್ತೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಂಜಾಬ್‌ನ ಅಮೃತಸರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಅಮೃತಸರ: ಡ್ರಗ್ಸ್ ಪ್ರಭಾವಕ್ಕೊಳಗಾದ ಯುವತಿಯೊಬ್ಬಳು ನಡುರಸ್ತೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಂಜಾಬ್‌ನ ಅಮೃತಸರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಅಮೃತಸರ ಪೂರ್ವ ಕ್ಷೇತ್ರದ ಮಕ್ಬೂಲ್‌ಪುರ ಪ್ರದೇಶದಲ್ಲಿ ಸೆರೆಹಿಡಿಯಲಾದ ವಿಡಿಯೋದಲ್ಲಿ ಯುವತಿಯೊಬ್ಬಳು ರಸ್ತೆಯ ಮೇಲೆ ನಿಂತಿದ್ದು, ಒರಗಿಕೊಂಡು ಚಲಿಸಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಈ ಪ್ರದೇಶವು ಮಾದಕ ವ್ಯಸನ ಮತ್ತು ವ್ಯಸನಿಗಳ ಸಮಸ್ಯೆಗಳಿಗೆ ಕುಖ್ಯಾತವಾಗಿದೆ.

ವೀಡಿಯೊ ವೈರಲ್ ಆದ ನಂತರ, ಮಕ್ಬೂಲ್ ಪುರ ಪೊಲೀಸರು ಭಾನುವಾರ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಮೂವರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡರು.

ಈ ಸಂಬಂಧ ಪೊಲೀಸರು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಅನುಮಾನಾಸ್ಪದ ಚಟುವಟಿಕೆಗಳ ಕಾರಣ 12 ಮಂದಿಯನ್ನು ತನಿಖೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಪ್ರದೇಶದಿಂದ ಕಳವು ಮಾಡಿರುವ ಶಂಕಿತ ಐದು ವಾಹನಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅಮೃತಸರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಎಎಪಿ ಶಾಸಕಿ ಜೀವನಜೋತ್ ಕೌರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!