ಸಿಕಂದರಾಬಾದ್ ಅಗ್ನಿ ದುರಂತ 
ದೇಶ

ಸಿಕಂದರಾಬಾದ್ ಅಗ್ನಿ ದುರಂತ: ಹೊಟೆಲ್, ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್!

ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಿಕಂದರಾಬಾದ್: ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಿಕಂದರಾಬಾದ್‌ನ ರೂಬಿ ಪ್ರೈಡ್ ಎಂಬ ಐಷಾರಾಮಿ ಹೋಟೆಲ್ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ ನಂತರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಈ ವರೆಗೂ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕಂದರಾಬಾದ್ ಪೊಲೀಸರು ರೂಬಿ ಪ್ರೈಡ್ ಹೊಟೆಲ್ ಮತ್ತು ಲಾಡ್ಜ್  ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಘಟನೆಯಲ್ಲಿ ಆಂಧ್ರಪ್ರದೇಶ, ದೆಹಲಿ, ಚೆನ್ನೈ, ಬಿಹಾರ  ಸೇರಿದಂತೆ ಹಲವು ರಾಜ್ಯಗಳ ಜನರು ಸಾವನ್ನಪ್ಪಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ತೆಲಂಗಾಣ ಸರ್ಕಾರ ತನಿಖೆಗೆ ಆದೇಶಿಸಿತ್ತು. ಇದೀಗ ರೂಬಿ ಪ್ರೈಡ್ ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇ- ಬೈಕ್ ಬ್ಯಾಟರ್ ಅಥವಾ ಜನರೇಟರ್ ಸ್ಫೋಟಗೊಂಡಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 

ಈ ಕುರಿತು ಮಾತನಾಡಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮಹಮೂದ್ ಅಲಿ ಅವರು, ಘಟನೆ ತುಂಬಾ ದುರದೃಷ್ಟಕರ. ಅಗ್ನಿಶಾಮಕ ದಳದ ತಂಡಗಳು ಲಾಡ್ಜ್‌ನಿಂದ ಜನರನ್ನು ರಕ್ಷಿಸಲು ಪ್ರಯತ್ನಿಸಿದವು ಆದರೆ ಭಾರೀ ಹೊಗೆಯಿಂದಾಗಿ ಕೆಲವರು ಸಾವನ್ನಪ್ಪಿದ್ದಾರೆ. ಕೆಲವರನ್ನು ಲಾಡ್ಜ್‌ನಿಂದ ರಕ್ಷಿಸಲಾಗಿದೆ. ಘಟನೆ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!