ಅಯೋಧ್ಯೆಯ ಉದ್ದೇಶಿತ ರಾಮಮಂದಿರ 
ದೇಶ

ಅಯೋಧ್ಯೆ: 2024ರ ಮಕರಸಂಕ್ರಾಂತಿಯಂದು ಹೊಸ ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ 14, 2024ರ ಮಕರಸಂಕ್ರಾಂತಿಯಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...

ಲಖನೌ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ 14, 2024ರ ಮಕರಸಂಕ್ರಾಂತಿಯಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.

2024 ರಲ್ಲಿ 'ಮಕರಸಂಕ್ರಾಂತಿ' ದಿನದಂದು ಭಗವಾನ್ ರಾಮ ಮತ್ತು ಅವರ ಸಹೋದರರ ವಿಗ್ರಹಗಳನ್ನು 'ಗರ್ಭ ಗುಡಿ'ಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ದೇವಾಲಯದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಿಳಿಸಿದ್ದಾರೆ.

ಮೂರು ಅಂತಸ್ತಿನ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ನೆಲ ಮಹಡಿಯನ್ನು ಡಿಸೆಂಬರ್ 2023 ರ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ರೈ ಹೇಳಿದ್ದಾರೆ.

ಸೋಮವಾರ ರಾತ್ರಿ ಅಯೋಧ್ಯೆಯ ಸರ್ಕ್ಯೂಟ್ ಹೌಸ್‌ನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ನೃಪೇಂದ್ರ ಮಿಶ್ರಾ ನೇತೃತ್ವದ ದೇವಾಲಯ ನಿರ್ಮಾಣ ಸಮಿತಿಯೊಂದಿಗೆ ಸಭೆ ನಡೆಸಿದ ನಂತರ ಚಂಪತ್ ರೈ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.

ಇದಲ್ಲದೆ, ಮಂದಿರ ನಿರ್ಮಾಣದ ವೆಚ್ಚವನ್ನು 1800 ಕೋಟಿ ರೂ. ಗೆ ಪರಿಷ್ಕರಿಸಲಾಗಿದೆ. ಚರ್ಚೆಯ ನಂತರ ದೇವಾಲಯ ನಿರ್ಮಾಣದ ವೆಚ್ಚವನ್ನು 1800 ಕೋಟಿ ರೂ. ಗೆ ಪರಿಷ್ಕರಿಸಲಾಗಿದೆ. ಅಲ್ಲದೆ ವೆಚ್ಚವು ಇನ್ನೂ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ದೇವಾಲಯದ ವೆಚ್ಚ ಸುಮಾರು 400 ಕೋಟಿ ಎಂದು ಅಂದಾಜಿಸಲಾಗಿತ್ತು.

ದೇವಸ್ಥಾನದ ಟ್ರಸ್ಟ್‌ನಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮತ್ತು ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ರೈ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT