ಮುಕುಲ್ ರೋಹಟ್ಗಿ 
ದೇಶ

ಭಾರತದ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತೆ ಕಮ್ ಬ್ಯಾಕ್: ವರದಿ

ಪ್ರಮುಖ ಬೆಳವಣಿಗೆಯಲ್ಲಿ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮರಳಲಿದ್ದಾರೆ ಎಂದು ಹೇಳಲಾಗಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮರಳಲಿದ್ದಾರೆ ಎಂದು ಹೇಳಲಾಗಿದೆ.

ಹಾಲಿ ಎಜಿ ಕೆ ಕೆ ವೇಣುಗೋಪಾಲ್ ಅವರ ಅವಧಿ ಸೆಪ್ಟೆಂಬರ್ 30 ರಂದು ಕೊನೆಗೊಳ್ಳಲಿರುವುದರಿಂದ ಅವರ ಸ್ಥಾನಕ್ಕೆ ಈ ಹಿಂದೆ ಅಟಾರ್ನಿ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನೇ ಮರು ಆಯ್ಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಅದರಂತೆ ಇದೇ ಅಕ್ಟೋಬರ್ 1ರಿಂದಲೇ ಮುಕುಲ್ ರೋಹ್ಟಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ. ಆ ಮೂಲಕ ರೋಹಟಗಿ ಅವರು ದೇಶದ 14ನೇ ಅಟಾರ್ನಿ ಜನರಲ್‌ (ಎ.ಜಿ) ಆಗಿ ನೇಮಕವಾಗಲಿದ್ದಾರೆ.

ರೋಹಟಗಿ ಅವರಿಗೆ ಇದು ಎರಡನೇ ಅವಧಿಯಾಗಿದ್ದು, ಇದಕ್ಕೂ ಮೊದಲು 2014ರ ಜೂನ್‌ನಿಂದ 2017ರ ಜೂನ್‌ ವರೆಗೆ ಎಜಿಐ ಆಗಿ (ಅಟಾರ್ನಿ ಜನರಲ್) ಸೇವೆ ಸಲ್ಲಿಸಿದ್ದರು. ಬಳಿಕ ಆ ಸ್ಥಾನಕ್ಕೆ ಕೆ.ಕೆ. ವೇಣುಗೋಪಾಲ್‌ ನೇಮಕಗೊಂಡಿದ್ದರು. 91 ವರ್ಷದ ವೇಣುಗೋಪಾಲ್‌ ಅವರ ಕರ್ತವ್ಯದ ಅವಧಿ ಸೆಪ್ಟೆಂಬರ್‌ 30ಕ್ಕೆ ಮುಕ್ತಾಯವಾಗಲಿದೆ. ರೋಹ್ಟಗಿ ಅಕ್ಟೋಬರ್‌ 1 ರಿಂದ ಸೇವೆ ಆರಂಭಿಸಲಿದ್ದಾರೆ. 

ರೋಹಟಗಿ ಅವರು ಈ ಹಿಂದೆ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್‌ ಮಿಶ್ರಾ ಮತ್ತು ಐಷಾರಾಮಿ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಪರ ವಕಾಲತ್ತು ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel