ಆಸ್ಪತ್ರೆಯಲ್ಲಿ ಗಾಯಾಳುಗಳು 
ದೇಶ

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್ಸು ಭೀಕರ ಅಪಘಾತ: 11 ಪ್ರಯಾಣಿಕರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪೂಂಚ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪೂಂಚ್ ಜಿಲ್ಲೆಯ ಸಾಜಿಯನ್ ಪ್ರದೇಶದಲ್ಲಿ ಮಿನಿ ಬಸ್ ಅಪಘಾತವಾಗಿ ಈ ಭೀಕರ ದುರ್ಘಟನೆ ಸಂಭವಿಸಿದ್ದು ಗಾಯಗೊಂಡವರನ್ನು ತಕ್ಷಣ ಮಂಡಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಮಂಡಿ ತಹಶಿಲ್ದಾರ್ ಶೆಹ್ಜಾದ್ ಲತಿಫ್ ತಿಳಿಸಿದ್ದಾರೆ.

ಮಿನಿ ಬಸ್ಸು ಮಂಡಿಯಿಂದ ಸಾಜಿಯನ್ ಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು ಭಾರತೀಯ ಸೇನೆಯಿಂದ ರಕ್ಷಣಾ ಕಾರ್ಯ ಮುಂದುವರಿದಿದೆ.

ಅಪಘಾತದಲ್ಲಿ ಮೃತಪಟ್ಟವರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಕಂಬನಿ ಮಿಡಿದಿದ್ದಾರೆ. ಜಮ್ಮು-ಕಾಶ್ಮೀರ ಗವರ್ನರ್ ಮನೋಜ್ ಸಿನ್ಹ ಅವರು ಸಂತಾಪ ಸೂಚಿಸಿದ್ದು ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಪ್ರಧಾನ ಮಂತ್ರಿ ಪರಿಹಾರ: ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಪೂಂಚ್ ಜಿಲ್ಲೆಯಲ್ಲಿ ಇಂದು ಮಿನಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!