ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 5,108 ಹೊಸ ಪ್ರಕರಣ, 19 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,108 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,10,057ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,108 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,10,057ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 45,749ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 12 ಸೇರಿದಂತೆ 19 ಮಂದಿ ಸಾವಿಗೀಡಾಗಿದ್ದು, ಈವರೆಗೆ 52,82,16 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.10 ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 1.44 ರಷ್ಟಿದ್ದು, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 215.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ. 24 ಗಂಟೆಗಳ ಅವಧಿಯಲ್ಲಿ 19,25,881 ಡೋಸ್‌ಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!