ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್ ಕರಾವಳಿಯಲ್ಲಿ ಆರು ಪಾಕಿಸ್ತಾನಿಗಳ ಬಂಧನ, 200 ಕೋಟಿ ರೂ. ಮೌಲ್ಯದ 40 ಕೆಜಿ ಹೆರಾಯಿನ್ ಜಪ್ತಿ

ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಲ್ಲಿದ್ದ 200 ಕೋಟಿಗೂ ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಟಿಎಸ್ ಹಿರಿಯ ಅಧಿಕಾರಿಯೊಬ್ಬರು...

ಅಹಮದಾಬಾದ್: ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಲ್ಲಿದ್ದ 200 ಕೋಟಿಗೂ ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಟಿಎಸ್ ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೆರಾಯಿನ್ ಪತ್ತೆಯಾಗಿದ್ದು, ದೋಣಿಯಲ್ಲಿದ್ದ ಆರು ಪಾಕಿಸ್ತಾನಿಗಳನ್ನೂ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕೋಸ್ಟ್ ಗಾರ್ಡ್ ಮತ್ತು ಎಟಿಎಸ್‌ನ ಜಂಟಿ ತಂಡ, ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಮೀನುಗಾರಿಕಾ ದೋಣಿಯನ್ನು ಸಮುದ್ರದ ಮಧ್ಯದಲ್ಲಿ ತಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೆರಾಯಿನ್ ಅನ್ನು ಗುಜರಾತ್ ಕರಾವಳಿಯಲ್ಲಿ ಇಳಿಸಿದ ನಂತರ ರಸ್ತೆ ಮೂಲಕ ಪಂಜಾಬ್‌ಗೆ ಸಾಗಿಸಲು ಉದ್ದೇಶಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ, ನಾವು ಪಾಕಿಸ್ತಾನದಿಂದ ಹೊರಟಿದ್ದ ದೋಣಿಯನ್ನು ತಡೆದು, 40 ಕೆಜಿ ಹೆರಾಯಿನ್‌ನೊಂದಿಗೆ ಆರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT