ಪ್ರಾತಿನಿಧಿಕ ಚಿತ್ರ 
ದೇಶ

ಮದುವೆಯಾಗುವ ನೆಪವೊಡ್ಡಿ ತೆಲುಗು ನಟಿಯ ಮೇಲೆ ಅತ್ಯಾಚಾರವೆಸಗಿದ ಮುಂಬೈ ಬಿಲ್ಡರ್ ಬಂಧನ!

ಕಪೂರ್ ತನ್ನ ಕಫ್ ಪರೇಡ್ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ಮತ್ತು ಗೋವಾದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರುದಾರರು ಹೇಳಿದ್ದಾರೆ.

ಮುಂಬೈ: ಮದುವೆಯಾಗುವ ನೆಪವೊಡ್ಡಿ ತೆಲುಗು ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಲ್ಡರ್‌ನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಆದಿತ್ಯ ಅಜಯ್ ಕಪೂರ್, ಕೆಲವು ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿದ್ದ 24 ವರ್ಷದ ನಟಿಯನ್ನು ಉಪನಗರ ಬಾಂದ್ರಾದಲ್ಲಿರುವ ಸ್ನೇಹಿತನ ನಿವಾಸದಲ್ಲಿ ಭೇಟಿಯಾಗಿದ್ದ. ಈ ವೇಳೆ ದೂರವಾಣಿ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡು, ಸಂಪರ್ಕದಲ್ಲಿದ್ದರು. ದಿನಗಳು ಕಳೆದಂತೆ ಅವರಿಬ್ಬರು ಪರಸ್ಪರ ಹತ್ತಿರವಾಗಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

'ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡುವ ಮೂಲಕ ಕಪೂರ್ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದರು' ಎಂದು ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

ಕಪೂರ್ ತನ್ನ ಕಫ್ ಪರೇಡ್ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ಮತ್ತು ಗೋವಾದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರುದಾರರು ಹೇಳಿದ್ದಾರೆ.

'ತನ್ನನ್ನು ಮದುವೆಯಾಗುವಂತೆ ಕೇಳಿದಾಗ ಆತ ತನ್ನೊಂದಿಗೆ ದೈಹಿಕ ಸಂಬಂಧವನ್ನು ಮುಂದುವರಿಸುವಂತೆ ಒತ್ತಾಯಿಸಿದ. ಆಕೆ ಅದಕ್ಕೆ ನಿರಾಕರಿಸಿದಾಗ ನಿಂದಿಸಿ ಹಲ್ಲೆಗೆ ಮುಂದಾದ. ಬಳಿತ ಸಂತ್ರಸ್ತೆಯ ಪೋಷಕರ ಫೋನ್ ನಂಬರ್‌ಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಕಿರುಕುಳದಿಂದ ಬೇಸತ್ತು ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ' ಎಂದು ಅವರು ಹೇಳಿದರು.

ಆರಂಭದಲ್ಲಿ ಅತ್ಯಾಚಾರದ ಆರೋಪದ ಮೇಲೆ ಎನ್‌ಎಂ ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು, ನಂತರ ಅಪರಾಧವು ಅವರ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಕಫ್ ಪರೇಡ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು.

ಅತ್ಯಾಚಾರ, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಪೂರ್ ಅವರನ್ನು ಬಂಧಿಸಲಾಗಿದೆ. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT