ಅಮೃತಾ ಫಡ್ನವಿಸ್ 
ದೇಶ

ದೇವೇಂದ್ರ ಫಡ್ನವಿಸ್ ಪತ್ನಿ ವಿರುದ್ಧ ಫೇಸ್‌ಬುಕ್‌ನಲ್ಲಿ ನಿಂದನೆ: ಮಹಿಳೆಯ ಬಂಧನ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಮತ್ತು ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯನ್ನು ಸೈಬರ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಮತ್ತು ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯನ್ನು ಸೈಬರ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಮಹಿಳೆ ಸ್ಮೃತಿ ಪಾಂಚಾಲ್ ಎಂದು ಗುರುತಿಸಲಾಗಿದ್ದು, ಅವರು ಕಳೆದ ಎರಡು ವರ್ಷಗಳಿಂದ ಅಮೃತಾ ಫಡ್ನವಿಸ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಪುಟದಲ್ಲಿ ಅನೇಕ ನಕಲಿ ಖಾತೆಗಳನ್ನು ಬಳಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪಾಂಚಾಲ್ ಅವರು 53 ನಕಲಿ ಫೇಸ್‌ಬುಕ್ ಐಡಿಗಳು ಮತ್ತು 13 ಜಿಮೇಲ್ ಖಾತೆಗಳನ್ನು ರಚಿಸಿದ್ದಾರೆ. ಇಲ್ಲಿನ ನ್ಯಾಯಾಲಯವು ಗುರುವಾರದವರೆಗೆ ಆಕೆಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಕೃತ್ಯದ ಹಿಂದಿನ ಆಕೆಯ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಂಚಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ