ಪ್ರಾತಿನಿಧಿಕ ಚಿತ್ರ 
ದೇಶ

ಪುಣೆ: ಒಂದು ತಾಸಿನೊಳಗೆ ಇಬ್ಬರು 19 ವರ್ಷದ ಬಾಲ್ಯ ಸ್ನೇಹಿತೆಯರು ಆತ್ಮಹತ್ಯೆ, ತನಿಖೆಗೆ ಆದೇಶ

ಒಂದೇ ಕಟ್ಟಡದಲ್ಲಿ ವಾಸವಾಗಿದ್ದ ಬಾಲ್ಯದ ಗೆಳತಿಯರಾದ 19 ವರ್ಷದ ಇಬ್ಬರು ಸ್ನೇಹಿತೆಯರು ಒಂದು ಗಂಟೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪುಣೆ: ಒಂದೇ ಕಟ್ಟಡದಲ್ಲಿ ವಾಸವಾಗಿದ್ದ ಬಾಲ್ಯದ ಗೆಳತಿಯರಾದ 19 ವರ್ಷದ ಇಬ್ಬರು ಸ್ನೇಹಿತೆಯರು ಒಂದು ಗಂಟೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಹಾರಾಷ್ಟ್ರದ ಪುಣೆಯ ಹಡಪ್ಸರ್ ಪಟ್ಟಣದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಸಂಜೆ 6.30 ರ ಸುಮಾರಿಗೆ ಮಲಗುವ ಕೋಣೆಯಲ್ಲಿ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಅರವಿಂದ್ ಗೋಕುಲೆ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈಕೆಯ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಶವಪರೀಕ್ಷೆಗೆ ಕಳುಹಿಸುತ್ತಿದ್ದಾಗ, ಯುವತಿಯ ಬಾಲ್ಯ ಸ್ನೇಹಿತೆ ರಾತ್ರಿ 7.30 ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡದ ಟೆರೇಸ್‌ನಿಂದ ಜಿಗಿದು ಮೃತಪಟ್ಟಿದ್ದಾಳೆ' ಎಂದು ಅವರು ಹೇಳಿದರು.

ಅವರಲ್ಲಿ ಒಬ್ಬರು ವಾಣಿಜ್ಯ ವಿದ್ಯಾರ್ಥಿ ಮತ್ತು ಇನ್ನೊಬ್ಬರು ಅನಿಮೇಷನ್ ಕೋರ್ಸ್ ಓದುತ್ತಿದ್ದರು. ಸದ್ಯ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಮತ್ತು ಆತ್ಮಹತ್ಯೆ ಹಿಂದಿನ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಗೆ ಆದೇಶಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT