ಮಾಜಿ ಸಂಸದೆ ಕೊತಪಲ್ಲಿ ಗೀತಾ 
ದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 42 ಕೋಟಿ ರೂಪಾಯಿ ವಂಚನೆ ಆರೋಪ: ಮಾಜಿ ಸಂಸದೆ ಗೀತಾಗೆ ಐದು ವರ್ಷ ಜೈಲು ಶಿಕ್ಷೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಕರಣದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಕೊತಪಲ್ಲಿ ಗೀತಾ ಅವರಿಗೆ ಐದು ವರ್ಷಗಳ ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್​ ಆದೇಶಿಸಿದೆ

ಹೈದರಾಬಾದ್: ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಕರಣದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಕೊತಪಲ್ಲಿ ಗೀತಾ ಅವರಿಗೆ ಐದು ವರ್ಷಗಳ ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್​ ಆದೇಶಿಸಿದೆ.

ಕಂಪೆನಿಯೊಂದರ ಹೆಸರಿನಲ್ಲಿ 50 ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡಿಲ್ಲ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶಿಕ್ಷೆ ವಿಧಿಸಲಾಗಿದೆ. ಗೀತಾ ಜತೆ, ಅವರ ಪತಿ ಪಿ. ರಾಮಕೋಟೇಶ್ವರ ರಾವ್ ಅವರಿಗೂ ಕೋರ್ಟ್​ ಶಿಕ್ಷೆ ವಿಧಿಸಿದೆ. ಅವರ ಜತೆ, ಬ್ಯಾಂಕ್ ಅಧಿಕಾರಿಗಳಾದ ಬಿ. ಕೆ ಜಯಪ್ರಕಾಶ್ ಮತ್ತು ಕೆ. ಕೆ ಅರವಿಂದಾಕ್ಷನ್ ಅವರಿಗೂ ಶಿಕ್ಷೆ ವಿಧಿಸಲಾಗಿದೆ.

50 ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡಿಲ್ಲ ಎಂಬ ಬಗ್ಗೆ ಪಿಎನ್‌ಬಿ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ಗೀತಾ ಅವರ ವಿಚಾರಣೆ ನಡೆಸಿ ಚಾರ್ಜ್​ ಶೀಟ್​ ಸಲ್ಲಿಕೆ ಮಾಡಿದ್ದರು, ನಂತರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಬಂಧನದ ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅದೇ ಇನ್ನೊಂದೆಡೆ, ಅವರ ಪರ ವಕೀಲರು ತೆಲಂಗಾಣ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 2014ರಲ್ಲಿ ವೈಎಸ್‌ಆರ್‌ಸಿಪಿಯಿಂದ ಅರಕು ಸಂಸದರಾಗಿ ಗೆದ್ದಿದ್ದ ಕೊತಪಲ್ಲಿ ಗೀತಾ ನಂತರ ಪಕ್ಷ ತೊರೆದಿದ್ದರು. 2018 ರಲ್ಲಿ ಜನಜಾಗೃತಿ ಹೆಸರಿನಲ್ಲಿ ರಾಜಕೀಯ ಪಕ್ಷವನ್ನು ಸ್ಥಾಪಿಸಲಾಯಿತು. ನಂತರ ಅವರು ಬಿಜೆಪಿ ಸೇರಿದರು ಮತ್ತು ಅವರ ಪಕ್ಷವನ್ನು ಅದರಲ್ಲಿ ವಿಲೀನಗೊಳಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT