ಲಖೀಮ್ ಪುರ್ ಖೇರಿಯಲ್ಲಿ ಹತ್ಯೆಗೀಡಾದ ಇಬ್ಬರು ಬಾಲಕಿಯರ ಪಾರ್ಥಿವ ಶರೀರ 
ದೇಶ

ಲಖಿಂಪುರ್ ಖೇರಿ ಸಹೋದರಿಯರ ಸಾವು: ಅತ್ಯಾಚಾರ, ಕತ್ತು ಹಿಸುಕಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ದಲಿತ ಸಹೋದರಿಯರಿಬ್ಬರ ಸಾವು ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಪ್ರಕಟಗೊಂಡಿದ್ದು, ಅತ್ಯಾಚಾರವೆಸಗಿ, ಕತ್ತು ಹಿಸುಕಿರುವುದು ದೃಢಪಟ್ಟಿದೆ.

ಲಖೀಮ್ ಪುರ್ ಖೇರಿ: ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ದಲಿತ ಸಹೋದರಿಯರಿಬ್ಬರ ಸಾವು ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಪ್ರಕಟಗೊಂಡಿದ್ದು, ಅತ್ಯಾಚಾರವೆಸಗಿ, ಕತ್ತು ಹಿಸುಕಿರುವುದು ದೃಢಪಟ್ಟಿದೆ.

ಎಸ್ ಪಿ ಸಂಜೀವ್ ಸುಮನ್ ಎಎನ್ಐ ಜೊತೆ ಮಾತನಾಡಿದ್ದು, ವರದಿಯನ್ನು ಉಲ್ಲೇಖಿಸಿ ಅತ್ಯಾಚಾರವೆಸಗಿದ ಬಳಿಕ ಬಾಲಕಿಯರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಲಖೀಮ್ ಪುರ್ ಖೇರಿಯಲ್ಲಿ ಬುಧವಾರ (ಸೆ.14 ರಂದು) ಇಬ್ಬರು ಯುವತಿಯರ ಶರೀರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 

ಘಟನೆ ಬೆಳಕಿಗೆ ಬಂದೊಡನೆ, ತೀವ್ರ ಪ್ರತಿಭಟನೆಗಳಾಗಿದ್ದು, ಬಾಲಕಿಯರ ತಂದೆ ಮಕ್ಕಳ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆ ನಡೆಯಲು ಕಾರಣರಾದವರನ್ನು ಗಲ್ಲಿಗೇರಿಸಬೇಕೆಂದು ಸಂತ್ರಸ್ತೆಯರ ಪೋಷಕರು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬ ಸದಸ್ಯರಿಗೆ ಸರ್ಕಾರ 1 ಕೋಟಿ ರೂಪಾಯಿ ಪರಿಹಾರ ಹಾಗೂ ಸರ್ಕಾರಿ ನೌಕರಿ ನೀಡಬೇಕೆಂದು ಆಗ್ರಹಿಸಿದ್ದಾರೆ. 

ನನ್ನ ಮಕ್ಕಳನ್ನು ಮನೆಯಿಂದ ಎಳೆದೊಯ್ದು, ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದಾರೆ. ನಮಗೆ ನ್ಯಾಯ ಬೇಕು. ಅಪರಾಧಿಗಳನ್ನು ಗಲ್ಲಿಗೇರಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್