ದೇಶ

ಭ್ರಷ್ಟಾಚಾರ ಪ್ರಕರಣ: ಎಸಿಬಿ ದಾಳಿ ನಂತರ ಆಪ್ ಶಾಸಕ ಅಮಾನತುಲ್ಲಾ ಖಾನ್ ಬಂಧನ

Vishwanath S

ನವದೆಹಲಿ: ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ದಾಳಿ ನಡೆಸಿದ್ದ ನಂತರ ಇದೀಗ ಎಸಿಬಿ ಅವರನ್ನು ಬಂಧಿಸಿದೆ.

2020ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ರನ್ನು ವಿಚಾರಣೆಗೆ ಕರೆಯಲಾಗಿತ್ತು. ವಿಚಾರಣೆ ಬೆನ್ನಲ್ಲೇ ಖಾನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಳಿ ವೇಳೆ 12 ಲಕ್ಷ ರೂ. ನಗದು ಮತ್ತು ಪರವಾನಗಿ ಇಲ್ಲದ ಗನ್, ಕೆಲವು ಕಾಟ್ರಿಡ್ಜ್‌ಗಳನ್ನು ಜಪ್ತಿ ಮಾಡಲಾಗಿತ್ತು.

ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾದ ಅಮಾನತುಲ್ಲಾ ಖಾನ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತಾವು ಹೊಸ ವಕ್ಫ್ ಬೋರ್ಡ್ ಕಚೇರಿಯನ್ನು ನಿರ್ಮಿಸಿದ್ದರಿಂದ ತಮ್ಮನ್ನು ವಿಚಾರಣೆ ಕರೆಯಲಾಗಿದೆ ಹೇಳಿಕೊಂಡಿದ್ದಾರೆ.

ಅಮಾನತುಲ್ಲಾ ಖಾನ್ ಅವರ ಮನೆ ಮತ್ತು ಅವರ ಇತರ ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SCROLL FOR NEXT