ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 6,298 ಹೊಸ ಪ್ರಕರಣ, 23 ಮಂದಿ ಸಾವು

Ramyashree GN

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 6,298 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,22,777ಕ್ಕೆ ಏರಿಕೆಯಾಗಿದೆ. ಇದೇ ವೇಳೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 46,748ಕ್ಕೆ ಏರಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಶುಕ್ರವಾರ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 2.04ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 1.89ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 1.70ರಷ್ಟಿದೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ಈವರೆಗೆ 4,39,47,756 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 216.17 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

SCROLL FOR NEXT