ಗುವಾಹಟಿಯ ಐಐಟಿ 
ದೇಶ

ಗುವಾಹಟಿಯ ಐಐಟಿ ಹಾಸ್ಟೆಲ್ ನಲ್ಲಿ ಕೇರಳ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ)ಯ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ತನ್ನ ಹಾಸ್ಟೆಲ್ ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗುವಾಹಟಿ: ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ)ಯ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ತನ್ನ ಹಾಸ್ಟೆಲ್ ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಸ್ಥೆಯು ವಿದ್ಯಾರ್ಥಿಯ ಹೆಸರನ್ನು ಬಹಿರಂಗಪಡಿಸಲಿಲ್ಲ. ಆದರೆ ಈ ವಿದ್ಯಾರ್ಥಿ ಕೇರಳದಿಂದ ಬಂದಿದ್ದು, ಬಿ.ಟೆಕ್ ಓದುತ್ತಿದ್ದ ಎಂದು ವರದಿಯಾಗಿದೆ.

ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಗುವಾಹಟಿಯ ಐಐಟಿ ಕ್ಯಾಂಪಸ್‌ನಲ್ಲಿ ಡಿಸೈನ್ ವಿಭಾಗದ ಅಂತಿಮ ವರ್ಷದ ಪದವಿಪೂರ್ವ ವಿದ್ಯಾರ್ಥಿಯೊಬ್ಬರು ಶುಕ್ರಾವರ ಅಕಾಲಿಕವಾಗಿ ನಿಧನರಾದರು ಎಂದು ಘೋಷಿಸಲು ಬಹಳ ದುಃಖವಾಗುತ್ತಿದೆ ಎಂದು ಗುವಾಹಟಿ ಐಐಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಸ್ಥೆಯು ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಗುವಾಹಟಿಗೆ ಆಗಮಿಸುತ್ತಿದ್ದಾರೆ.

"ಈ ದುಃಖದ ಸಮಯದಲ್ಲಿ ಕುಟುಂಬದ ಗೌಪ್ಯತೆಯನ್ನು ಗೌರವಿಸಲು ನಾವು ಪ್ರತಿಯೊಬ್ಬರನ್ನು ವಿನಂತಿಸುತ್ತೇವೆ. ಸಂಸ್ಥೆಯು ವಿದ್ಯಾರ್ಥಿಯ ಸಾವಿಗೆ ತೀವ್ರ ಸಂತಾಪವನ್ನು ಸೂಚಿಸುತ್ತದೆ" ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT