ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: 24 ಗಂಟೆಗಳಲ್ಲಿ 5,664 ಹೊಸ ಪ್ರಕರಣ, ಕೇರಳದಲ್ಲಿ 21 ಜನ ಸೇರಿ 35 ಮಂದಿ ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5,664 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ  4,45,34,188ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,922ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5,664 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ  4,45,34,188ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,922ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 21 ಜನರು ಸೇರಿ 35 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,28,337 ಜನರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕಣರಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 1.96 ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.79ರಷ್ಟಿದೆ. ದೇಶದಲ್ಲಿ ಈವರೆಗೆ 4,39,57,929 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 216.56 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್