ದೇಶ

ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್: ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Ramyashree GN

ಚಂಡೀಗಢ: ಹಲವಾರು ವಿದ್ಯಾರ್ಥಿನಿಯರ  ಆಕ್ಷೇಪಾರ್ಹ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಪಂಜಾಬ್‌ನ ಮೊಹಾಲಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಲೂಧಿಯಾನ-ಚಂಡೀಗಢ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಮಧ್ಯರಾತ್ರಿ ಪ್ರತಿಭಟನೆ ನಡೆಸಲಾಯಿತು.

ಸದ್ಯ, ಆನ್‌ಲೈನ್‌ನಲ್ಲಿ ವಿಡಿಯೋಗಳನ್ನು ಶೇರ್ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿ ಕೆಲವು ಮಹಿಳಾ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದ ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಅವುಗಳನ್ನು ಶಿಮ್ಲಾದ ಯುವಕನಿಗೆ ಕಳುಹಿಸಿದ್ದಾರೆ. ಬಳಿಕ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಶಾಂತವಾಗಿರುವಂತೆ ಕೇಳಿಕೊಂಡರು ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಭರವಸೆ ನೀಡಿದರು.
'ಇದು ಸೂಕ್ಷ್ಮ ವಿಷಯವಾಗಿದೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿದ್ದಾಗಿದೆ. ಮಾಧ್ಯಮಗಳು ಸೇರಿದಂತೆ ನಾವೆಲ್ಲರೂ ಬಹಳ ಜಾಗರೂಕರಾಗಿರಬೇಕು. ಇದು ಸಮಾಜವಾಗಿ ನಮ್ಮ ಪರೀಕ್ಷೆಯಾಗಿದೆ' ಎಂದು ಬೈನ್ಸ್ ಟ್ವೀಟ್‌ ಮಾಡಿದ್ದಾರೆ.

SCROLL FOR NEXT