ಮಮತಾ ಬ್ಯಾನರ್ಜಿ 
ದೇಶ

ಟಿಎಂಸಿಗೆ ಹಿನ್ನಡೆ: 'ದೀದಿ' ಭದ್ರಕೋಟೆ ನಂದಿಗ್ರಾಮದಲ್ಲಿ 12 ಸ್ಥಾನಗಳಲ್ಲಿ 1 ಸ್ಥಾನದಲ್ಲಿ ಮಾತ್ರ ಗೆಲುವು!

ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾದ ನಂದಿಗ್ರಾಮದಲ್ಲಿ ಸಹಕಾರಿ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾದ ನಂದಿಗ್ರಾಮದಲ್ಲಿ ಸಹಕಾರಿ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿಂದೆ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ನಡೆಸುತ್ತಿದ್ದ ಸಹಕಾರಿ ಸಂಸ್ಥೆ ಭೆಕುಟಿಯಾ ಸಮಬಾಯ್ ಕೃಷಿ ಸಮಿತಿಯ 12 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಮಾತ್ರ ತೃಣಮೂಲನ ಪಾಲಾಗಿದೆ. 

ಕಳೆದ ತಿಂಗಳು ನಂದಿಗ್ರಾಮದ ಇನ್ನೊಂದು ಭಾಗದಲ್ಲಿ ತೃಣಮೂಲ ದೊಡ್ಡ ಗೆಲುವು ಸಾಧಿಸಿತ್ತು. ನಂದಿಗ್ರಾಮ-2 ಬ್ಲಾಕ್‌ನಲ್ಲಿ ತೃಣಮೂಲ 51 ಸ್ಥಾನಗಳನ್ನು ಗೆದ್ದಿತ್ತು.  ಸಿಪಿಎಂ ಒಂದು ಸ್ಥಾನ ಗೆದ್ದಿದ್ದರೆ. ಬಿಜೆಪಿ ಯಾವುದೇ ಸ್ಥಾನ ಗಳಿಸಿರಲಿಲ್ಲ. ಮಮತಾ ಬ್ಯಾನರ್ಜಿಯವರ ಪಕ್ಷವು ಕೊಂಟೈ ಮತ್ತು ಸಿಂಗೂರ್‌ನಲ್ಲಿಯೂ ಸಹ ಚುನಾವಣೆಯನ್ನು ಗೆದ್ದಿದೆ.

ಭಾನುವಾರ ನಡೆದ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪರಸ್ಪರ ಹಿಂಸಾಚಾರದ ಆರೋಪಗಳನ್ನು ಮಾಡಿಕೊಂಡಿದ್ದವು. ತೃಣಮೂಲ ಹೊರಗಿನವರನ್ನು ಕರೆತಂದು ಮತದಾನಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸುವೇಂದು ಅಧಿಕಾರಿ ವಿರುದ್ಧ ತೃಣಮೂಲ ಅದೇ ಆರೋಪವನ್ನು ಹೊರಿಸಿತ್ತು.

ನಂದಿಗ್ರಾಮ 2021ರ ಬಂಗಾಳ ಚುನಾವಣೆಗೆ ತಿಂಗಳ ಮೊದಲು ತೃಣಮೂಲವನ್ನು ತೊರೆದು ಬಿಜೆಪಿಗೆ ಸೇರಿದ ಮಮತಾ ಬ್ಯಾನರ್ಜಿ ಅವರ ಮಾಜಿ ಸಹಾಯಕ ಸುವೇಂದು ಅಧಿಕಾರಿ ಅವರ ಕ್ಷೇತ್ರವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಭರ್ಜರಿ ಬಹುಮತ ಪಡೆದಿತ್ತು. ಹೀಗಾಗಿ ಮಮತಾ ಮೂರನೇ ಬಾರಿಗೆ ಮುಖ್ಯಮಂತ್ರಿಯಾದರು. ಆದರೆ ಅವರು ಸ್ಪರ್ಧಿಸಿದ್ದ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಪ್ರತಿಷ್ಠೆಯ ಕಣದಲ್ಲಿ ಸೋತಿದ್ದರು. 

ಬಿಜೆಪಿಯ ನಿರ್ದೇಶಕರ ಸಮಿತಿಯನ್ನು ಆಯ್ಕೆ ಮಾಡಿದ್ದಕ್ಕಾಗಿ ನನ್ನ ನಂದಿಗ್ರಾಮ ಕ್ಷೇತ್ರದ ಭೆಕುಟಿಯಾ ಸಮಬಾಯ್ ಕೃಷಿ ಸಮಿತಿಯ ಎಲ್ಲಾ ಸಹಕಾರಿ ಸಂಘದ ಮತದಾರರಿಗೆ ಶುಭಾಶಯಗಳು. ಈ ರೀತಿಯ ಗೆಲುವುಗಳು ಭವಿಷ್ಯದಲ್ಲಿ ಹೆಚ್ಚಿನ ಯಶಸ್ಸಿಗೆ ದಾರಿ ಮಾಡಿಕೊಡುತ್ತವೆ ಎಂದು ಸುವೇಂದು ಅಧಿಕಾರಿ ಟ್ವೀಟ್ ಮಾಡಿದ್ದಾರೆ.

ನಂದಿಗ್ರಾಮ್‌ನಲ್ಲಿನ ಸಹಕಾರಿ ಸಂಸ್ಥೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಿನ್ನಡೆಯನ್ನು ಬಿಜೆಪಿ ನಾಯಕರು ಬಂಗಾಳದ ಪ್ರಮುಖ ಭದ್ರಕೋಟೆಗಳಲ್ಲಿ ಮಮತಾ ಬ್ಯಾನರ್ಜಿ ತನ್ನ ಹಿಡಿತವನ್ನು ಕಳೆದುಕೊಳ್ಳುತ್ತಿರುವ ಸಂಕೇತವೆಂದು ಬಿಂಬಿಸಿದ್ದಾರೆ.

ಆದರೆ ಕಳೆದ ತಿಂಗಳು ನಂದಿಗ್ರಾಮದಲ್ಲಿ ಹನುಭುನಿಯಾ, ಘೋಲ್ಪುಕೂರ್ ಮತ್ತು ಬಿರುಲಿಯಾದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ತೃಣಮೂಲ ನಾಯಕರು ಗೆದ್ದರು. ಅದರಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಬಿಜೆಪಿ ವಿಫಲವಾಗಿದೆ. ತೃಣಮೂಲ 2021 ರಲ್ಲಿ ಕಳೆದುಕೊಂಡ ಪ್ರದೇಶವನ್ನು ಮರಳಿ ಪಡೆಯುತ್ತಿದೆ ಎಂಬುದಕ್ಕೆ ಇದು ಪುರಾವೆ ಎಂದು ಟಿಎಂಸಿ ನಾಯಕರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT