ಕೇಂದ್ರ ಗೃಹ ಸಚಿವ ಅಮಿತ್ ಶಾ- ಮಮತಾ ಬ್ಯಾನರ್ಜಿ 
ದೇಶ

ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ

ಜಾರಿ ನಿರ್ದೇಶನಾಲಯ (ಇಡಿ)  ಸಿಬಿಐ ಸೇರಿದಂತೆ ಇತರ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳ ನಿರ್ಣಯ ಅಂಗೀಕರಿಸಿದೆ. ಈ ರೀತಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ. 

ಕೋಲ್ಕತ್ತ: ಜಾರಿ ನಿರ್ದೇಶನಾಲಯ (ಇಡಿ)  ಸಿಬಿಐ ಸೇರಿದಂತೆ ಇತರ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳ ನಿರ್ಣಯ ಅಂಗೀಕರಿಸಿದೆ. ಈ ರೀತಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ. 

ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳ ಪದಾಧಿಕಾರಿಗಳನ್ನು ನಿರ್ದಿಷ್ಟವಾಗಿ ಆಯ್ಕೆ ಮಾಡಿ ಟಾರ್ಗೆಟ್ ಮಾಡಲಾಗುತ್ತಿದೆ ಹಾಗೂ ಭಯದ ವಾತಾವರಣ ಮೂಡಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಗಂಭೀರ ಆರೋಪ ಮಾಡಿದೆ. 

ಶಾಲಾ ನೇಮಕಾತಿ ಹಗರಣ, ಗೋವು ಕಳ್ಳಸಾಗಣೆ, ಕಲ್ಲಿದ್ದಲು ಕಳ್ಳತನ ಪ್ರಕರಣಗಳೂ ಸೇರಿದಂತೆ ರಾಜ್ಯದಲ್ಲಿ ಉನ್ನತ ಮಟ್ಟದ ಪ್ರಕರಣಗಳನ್ನು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ಈ ನಿರ್ಣಯ ಕೈಗೊಂಡಿದೆ. 

ಟಿಎಂಸಿ ಶಾಸಕರಾದ ನಿರ್ಮಲ್ ಘೋಷ್ ಹಾಗೂ ತಪಸ್ ರಾಯ್ ನಿರ್ಣಯವನ್ನು ಮಂಡಿಸಿದರು. "ಕೇಂದ್ರೀಯ ಏಜೆನ್ಸಿಗಳು ಪಶ್ಚಿಮ ಬಂಗಾಳ ಆಡಳಿತಾ ರೂಢ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದು, ಭಯದ ವಾತಾವರಣ ಮೂಡಿಸುತ್ತಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದ್ದು, ಇದರಲ್ಲಿ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಹಾಗೂ ಸುಬ್ರತಾ ಮುಖರ್ಜಿ ಅವರನ್ನು  ನಾರದಾ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ 2021 ರ ವಿಧಾನಸಭಾ ಚುನಾವಣೆಯ ನಂತರ ಸಿಬಿಐ ಬಂಧಿಸಿರುವುದನ್ನು ಉಲ್ಲೇಖಿಸಲಾಗಿದೆ.

ಬಿಜೆಪಿ ನಾಯಕರ ಹೆಸರು ಚಿಟ್ ಫಂಡ್ ಹಗರಣದಲ್ಲಿದ್ದರೂ, ಏಜೆನ್ಸಿಗಳು ಕೇವಲ ಹಗರಣದ ಒಂದು ಭಾಗವನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ನಿರ್ಣಯ ಮಂಡಿಸಿದೆ. ಕೇಂದ್ರೀಯ ಏಜೆನ್ಸಿಗಳು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಉರುಳಿಸುವ ಪಿತೂರಿ ಮತ್ತು ಭಯದ ರಾಜಕೀಯವನ್ನು ಹೆಚ್ಚಿಸುವುದಕ್ಕೆ ಸಹಕರಿಸುತ್ತಿವೆ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದೆ.

ಇನ್ನು ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಈ ಬಗ್ಗೆ ಮಾತನಾಡಿದ್ದು, ಇದೆಲ್ಲದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ ಎಂದು ತಾವು ನಂಬುವುದಿಲ್ಲ ಎಂದು ಹೇಳಿದ್ದು, ಬಿಜೆಪಿ ನಾಯಕರ ಒಂದು ಗುಂಪು ಅವರ ಹಿತಾಸಕ್ತಿಗಳನ್ನು ಪೂರೈಸಲು ಕೇಂದ್ರ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಸಿಬಿಐ ಈಗ ಅಮಿತ್ ಶಾ ನಿರ್ವಹಿಸುತ್ತಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಉತ್ತರದಾಯಿಯಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT