ಹನಿ ಬಾಬು 
ದೇಶ

ಎಲ್ಗರ್ ಪರಿಷತ್ ಪ್ರಕರಣ: ದೆಹಲಿ ವಿವಿ ಪ್ರೊಫೆಸರ್ ಹನಿ ಬಾಬುಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಕಾರ

ಎಲ್ಗರ್ ಪರಿಷತ್ -ಮಾವೋವಾದಿ ನಂಟು ಪ್ರಕರಣದ ಆರೋಪಿಯಾಗಿರುವ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹನಿ ಬಾಬು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮುಂಬೈ: ಎಲ್ಗರ್ ಪರಿಷತ್ -ಮಾವೋವಾದಿ ನಂಟು ಪ್ರಕರಣದ ಆರೋಪಿಯಾಗಿರುವ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹನಿ ಬಾಬು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಜಾಮೀನು ನಿರಾಕರಿಸಿದ ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಬಾಬು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಎನ್ ಎಂ ಜಾಮ್ದಾರ್ ಮತ್ತು ಎನ್ ಆರ್ ಬೋರ್ಕರ್ ಅವರ ವಿಭಾಗೀಯ ಪೀಠ ಹೇಳಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ನಾಯಕರ ಸೂಚನೆಯ ಮೇರೆಗೆ ಮಾವೋವಾದಿ ಚಟುವಟಿಕೆಗಳು ಮತ್ತು ಸಿದ್ಧಾಂತವನ್ನು ಪ್ರಚಾರ ಮಾಡುವಲ್ಲಿ ಬಾಬು ಸಹ ಸಂಚುಕೋರ ಎಂದು ಆರೋಪಿಸಿದೆ. ಈ  ಪ್ರಕರಣದಲ್ಲಿ ಜುಲೈ 2020 ರಲ್ಲಿ ಹಾನಿ ಬಾಬು ಅವರನ್ನು ಬಂಧಿಸಲಾಗಿತ್ತು.  ಪ್ರಸ್ತುತ ಅವರು ನೆರೆಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದಾರೆ.

ಡಿಸೆಂಬರ್ 31, 2017 ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದನಕಾರಿ ಭಾಷಣಗಳಿಗೆ ಈ ಪ್ರಕರಣವು ಸಂಬಂಧಿಸಿದ್ದು, ಮರುದಿನ ನಗರದ ಹೊರವಲಯದಲ್ಲಿರುವ ಕೋರೆಗಾಂವ್ ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ನನ್ನ ಬಿಡಪ್ಪ, ನಿನಗೆ ತಾಕತ್ತಿದ್ದರೆ ಮೋದಿಗೆ ಥೂ ಅನ್ನು ನೋಡೋಣ: ಸುನೀಲ್ ಕುಮಾರ್‌ಗೆ ಸಿದ್ದರಾಮಯ್ಯ ಸವಾಲು, Video!

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

SCROLL FOR NEXT