ಕ್ಯಾ.ಅಮರಿಂದರ್ ಸಿಂಗ್ 
ದೇಶ

ಪತಿ ಏನು ಮಾಡಿದರೂ ಅದನ್ನು ಪತ್ನಿ ಅನುಸರಿಸುವ ಅಗತ್ಯವಿಲ್ಲ: ಬಿಜೆಪಿ ಸೇರಿದ ಅಮರೀಂದರ್ ಸಿಂಗ್ ಹೀಗೆ ಹೇಳಿದ್ದೇಕೆ?

ಬಿಜೆಪಿ ಸೇರ್ಪಡೆಯಾದ  ಕಾಂಗ್ರೆಸ್‌ನ ಮಾಜಿ ನಾಯಕ ಅಮರಿಂದರ್ ಸಿಂಗ್ ಬೆನ್ನಲ್ಲೇ ಅವರ ಪತ್ನಿಯೂ ಕೇಸರಿ ಪಕ್ಷ ಸೇರ್ತಾರಾ ಎಂಬ ಪ್ರಶ್ನೆಗೆ  ಖುದ್ದು ಅಮರೀಂದರ್ ಸಿಂಗ್  ಅವರೇ ಉತ್ತರ ಕೊಟ್ಟಿದ್ದಾರೆ.  

ನವದೆಹಲಿ: ಬಿಜೆಪಿ ಸೇರ್ಪಡೆಯಾದ  ಕಾಂಗ್ರೆಸ್‌ನ ಮಾಜಿ ನಾಯಕ ಅಮರಿಂದರ್ ಸಿಂಗ್ ಬೆನ್ನಲ್ಲೇ ಅವರ ಪತ್ನಿಯೂ ಕೇಸರಿ ಪಕ್ಷ ಸೇರ್ತಾರಾ ಎಂಬ ಪ್ರಶ್ನೆಗೆ  ಖುದ್ದು ಅಮರೀಂದರ್ ಸಿಂಗ್  ಅವರೇ ಉತ್ತರ ಕೊಟ್ಟಿದ್ದಾರೆ.  

ಅಮರೀಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಇನ್ನೂ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಪತ್ನಿಯೂ ಪತಿಯ ಹಾದಿ ಹಿಡಿಯುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅಮರೀಂದರ್ ಸಿಂಗ್ , ಪತಿ ಏನು ಮಾಡಿದರೂ ಪತ್ನಿ ಅನುಸರಿಸುವ ಅಗತ್ಯವಿಲ್ಲ ಎಂದು ಉತ್ತರಿಸಿದರು.

ಅಮರೀಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಅವರು 2009-2014ರ ಅವಧಿಯಲ್ಲಿ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕಿರಿಯ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ತಮ್ಮ ಹಿಂದಿನ ಬಿಜೆಪಿ ಪಕ್ಷ ಸೇರಿದ ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದರು. ಐದು ದಶಕಗಳ ತಮ್ಮ ಪಕ್ಷವಾದ ಕಾಂಗ್ರೆಸ್‌ನಿಂದ ಹೊರಬಂದ ಕೆಲವೇ ದಿನಗಳಲ್ಲಿ ಅವರು ಕಳೆದ ವರ್ಷ ಪಕ್ಷವನ್ನು ಸ್ಥಾಪಿಸಿದ್ದರು.

ದೆಹಲಿ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ನರೇಂದ್ರ ಸಿಂಗ್ ತೋಮರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬೆನ್ನಲ್ಲೇ, ದೇಶದ ಹಿತಾಸಕ್ತಿಗಳನ್ನು ನೋಡಿಕೊಳ್ಳುವ ಪಕ್ಷವನ್ನು ಸೇರುವ ಸಮಯ ಇದು ಎಂದು ಹೇಳಿದರು. ಅಮರಿಂದರ್ ಸಿಂಗ್‌ ರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ  ಬಿಜೆಪಿಯು ಈಗ ಪಂಜಾಬ್‌ನಲ್ಲಿ ಪ್ರಮುಖ ಸಿಖ್ ಮುಖವನ್ನು ಹೊಂದಿದೆ. ಅಮರೀಂದರ್ ಸಿಂಗ್ ಅವರು ಹಲವಾರು ದಶಕಗಳಿಂದ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT