ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ ನೀಡುತ್ತಿರುವುದು 
ದೇಶ

ಮಹಿಳಾ ಕಬಡ್ಡಿ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ ನೀಡಿದ ವಿಡಿಯೋ ವೈರಲ್, ಅಧಿಕಾರಿ ಅಮಾನತು

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು...

ಲಖನೌ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಕ್ರೀಡೆ) ನವನೀತ್ ಸೆಹಗಲ್ ಅವರು ಸಹರಾನ್‌ಪುರ ಜಿಲ್ಲಾ ಕ್ರೀಡಾ ಅಧಿಕಾರಿ ಅನಿಮೇಶ್ ಸಕ್ಸೇನಾ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ಪಿಟಿಐಗೆ ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಾ.ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಬ್ ಜೂನಿಯರ್ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟಿದ್ದ ಅನ್ನ ಮತ್ತು ಪೂರಿಯನ್ನು ಬಡಿಸುತ್ತಿರುವ ದೃಶ್ಯ ಕಂಡು ಬಂದಿದೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಹಣಕಾಸು ಮತ್ತು ಕಂದಾಯ) ರಜನೀಶ್ ಕುಮಾರ್ ಮಿಶ್ರಾ ಅವರು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಖಿಲೇಶ್ ಸಿಂಗ್ ಹೇಳಿದ್ದಾರೆ. 

ಅನ್ನ ಮತ್ತು ಪೂರಿಯನ್ನು ಶೌಚಾಲಯದಲ್ಲಿ ಇಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಆಟಗಾರರು ಶೌಚಾಲಯದೊಳಗೆ ಇಟ್ಟಿದ್ದ ಆಹಾರವನ್ನು ತೆಗೆದುಕೊಳ್ಳುತ್ತಿರುವ ದೃಶ್ಯ ಕಂಡು ಬಂದಿದೆ” ಎಂದು ಸಿಂಗ್ ಹೇಳಿದ್ದಾರೆ.

ಪಂದ್ಯಾವಳಿಯನ್ನು ಸೆಪ್ಟೆಂಬರ್ 16 ರಿಂದ 18 ರವರೆಗೆ ಆಯೋಜಿಸಲಾಗಿದ್ದು, ಇದರಲ್ಲಿ ರಾಜ್ಯದ 16 ವಿಭಾಗಗಳಿಂದ 300 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT