ಅಮನತುಲ್ಲಾ ಖಾನ್ 
ದೇಶ

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತೆ 5 ದಿನ ಕಾಲ ಎಸಿಬಿ ವಶಕ್ಕೆ!

ದೆಹಲಿ ವಕ್ಫ್ ಮಂಡಳಿಯಲ್ಲಿ ಅಕ್ರಮ ನೇಮಕಾತಿ ಆರೋಪದ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರು ಮುಂದಿನ ಐದು ದಿನಗಳ ಕಾಲ ಭ್ರಷ್ಟಾಚಾರ ನಿಗ್ರಹ ದಳದ ವಶದಲ್ಲಿರಲಿದ್ದಾರೆ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯಲ್ಲಿ ಅಕ್ರಮ ನೇಮಕಾತಿ ಆರೋಪದ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರು ಮುಂದಿನ ಐದು ದಿನಗಳ ಕಾಲ ಭ್ರಷ್ಟಾಚಾರ ನಿಗ್ರಹ ದಳದ ವಶದಲ್ಲಿರಲಿದ್ದಾರೆ. 

ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾಗ ಅಮಾನತುಲ್ಲಾ ಖಾನ್ ಅವರು ಮಾರ್ಗಸೂಚಿಗಳನ್ನು ಉಲ್ಲಂಘಿಸಿ 32 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಎಸಿಬಿ ಆರೋಪಿಸಿದೆ. ಅಮಾನತುಲ್ಲಾ ದೆಹಲಿ ವಕ್ಫ್ ಮಂಡಳಿಯ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಸಿಬಿ ಹೇಳಿದೆ.

ಎಸಿಬಿ ದಾಳಿ ವೇಳೆ ಅವರ ಮನೆಯಲ್ಲಿ  24 ಲಕ್ಷ ರೂ. ನಗದು ಹಾಗೂ ಎರಡು ಅಕ್ರಮ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅವರ ಸಂಬಂಧಿಕರು ಮತ್ತು ಬೆಂಬಲಿಗರ ನಿವಾಸದ ಮೇಲೂ ಎಸಿಬಿ ದಾಳಿ ನಡೆಸಿತ್ತು.

ಎಎಪಿ ತನ್ನ ಶಾಸಕನ ಬೆಂಬಲಕ್ಕೆ ನಿಂತಿದ್ದಿ ಆಧಾರ ರಹಿತ ಬಂಧನ ಮತ್ತು ಅವರ ವಿರುದ್ಧದ ಪ್ರಕರಣ ಬೋಗಸ್ ಎಂದು ಆರೋಪಿಸಿದೆ.ಅವರ ಮನೆ ಮತ್ತು ಕಚೇರಿ ಮೇಲೆ ನಡೆದ ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ. ಇದು ಎಎಪಿಯನ್ನು ಕೆಡಿಸುವ ಮತ್ತು ಶಾಸಕರ ವರ್ಚಸ್ಸಿಗೆ ಕಳಂಕ ತರುವ ಹೊಸ ಪ್ರಯತ್ನ ಎಂದು ಪಕ್ಷ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ